ಪೆರಾಜೆ: ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಸಂಪನ್ನ

0

ವಿಜೃಂಭಣೆಯಿಂದ ನಡೆದ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ

ಕೊಡಗಿನ ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲದೊಂದಿಗೆ ಇಂದು ಸಂಪನ್ನಗೊಂಡಿತು.


ನೂರಾರು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದು, ಪ್ರಸಾದ ಸ್ವೀಕರಿಸಿದರು.


ಏ. 9ರಂದು ಸಂಜೆ ಭಂಡಾರ ತೆಗೆದು ಮೇಲೇರಿಗೆ ಅಗ್ನಿಸ್ಪರ್ಶ ಮಾಡಲಾಯಿತು.
ರಾತ್ರಿ ಅನ್ನ ಸಂತರ್ಪಣೆ ನಡೆದ ಬಳಿಕ ಶ್ರೀ ಮಹಾವಿಷ್ಣುಮೂರ್ತಿ ದೈವದ ಕು ಕುಳ್ಚಟ ನಡೆಯಿತು.

ಬಳಿಕ ಪೆರಾಜೆ ಯುವಶಕ್ತಿ ಕ್ರೀಡಾ ಮತ್ತು ಹವ್ಯಾಸಿ ಕಲಾ ಸಂಘದ ವತಿಯಿಂದ 31 ನೇ ವರ್ಷದ ಸಾರ್ವಜನಿಕ ಪುರುಷರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ನಡೆಯಿತು.


ಏ. 10 ರಂದು ಬೆಳಿಗ್ಗೆ ಶ್ರೀ ವಿಷ್ಣುಮೂರ್ತಿ ದೈವದ ಅಗ್ನಿ ಪ್ರವೇಶ ನಡೆದು, ಶ್ರೀ ರುದ್ರಚಾಮುಂಡಿ ದೈವದ ಕೋಲ ನಡೆಯಿತು. ನಂತರ ಪ್ರಸಾದ ವಿತರಣೆ ಬಳಿಕ ಮಾರಿಕಳ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಪದಾಧಿಕಾರಿಗಳು ಸೇರಿದಂತೆ ನೂರಾರು ಭಕ್ತರು ಉಪಸ್ಥಿತರಿದ್ದರು.