ಎನ್ನೆಂಸಿ : ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

0

ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇದರ ಆಂತರಿಕ ಗುಣಮಟ್ಟ ಖಾತರಿ ಕೋಶ, ಕೆರಿಯರ್ ಗೈಡೆನ್ಸ್ & ಪ್ಲೇಸ್ಮೆಂಟ್ ಸೆಲ್ ಹಾಗೂ ದ.ಕ ಜಿಲ್ಲಾ ಸಾಹಿತ್ಯ ಪರಿಷತ್ ಇದರ ಸುಳ್ಯ ಘಟಕದ ಜಂಟಿ ಆಶ್ರಯದಲ್ಲಿ ಕನ್ನಡದಲ್ಲಿ ಐ.ಎ.ಎಸ್, ಐ.ಪಿ.ಎಸ್, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರುದ್ರಕುಮಾರ್ ಎಂ.ಎಂ ಇವರು ವಹಿಸಿದ್ದರು. ವಿವೇಕಾನಂದ ಐ.ಎ.ಎಸ್ ಅಧ್ಯಯನ ಕೇಂದ್ರ ಯಶಸ್ ಇದರ ಸಂಪನ್ಮೂಲ ವ್ಯಕ್ತಿಗಳಾಗಿರುವ ಶ್ರೀಯುತ ಉಮೇಶ್ ನಾಯಕ್ ಪುತ್ತೂರು ಹಾಗೂ ಶ್ರೀಯುತ ದರ್ಶನ್ ಗರ್ತಿಕೆರೆ ಇವರು ವಿದ್ಯಾರ್ಥಿಗಳಿಗೆ ಪರೀಕ್ಷೆಗಳ ಕುರಿತು ಮಾಹಿತಿಯನ್ನು ನೀಡಿದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಬಾಲಚಂದ್ರ ಎಂ.ಎಂ ಇವರು ಕಾರ್ಯಕ್ರಮಕ್ಕೆ ಶುಭಾಶಯದ ನುಡಿಗಳನ್ನಾಡಿದರು.

ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಪೇರಾಲು ಇವರು ಕಾರ್ಯಕ್ರಮಕ್ಕೆ ಸ್ವಾಗತ ನುಡಿಗಳನ್ನಾಡಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀಮತಿ ರತ್ನಾವತಿ ಡಿ, ಪ್ಲೇಸ್ಮೆಂಟ್ ಸೆಲ್ ಸಂಯೋಜಕಿ ಡಾ. ವಿಜಯಲಕ್ಷ್ಮಿ ಎನ್,ಎಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀಮತಿ ಮಮತ ಕೆ, ಸಂಯೋಜಕಿ ಆಂತರಿಕ ಗುಣಮಟ್ಟ ಖಾತರಿ ಕೋಶ ವಂದನಾರ್ಪಣೆಯನ್ನು ನೆರವೇರಿಸಿದರು.

ವಿದ್ಯಾರ್ಥಿನಿಯರಾದ ಜ್ಞಾನ, ಹರ್ಷತಾ, ವರ್ಷಾ, ಚೈತ್ರ ಇವರು ಪ್ರಾರ್ಥಿಸಿದರು. ಕುಮಾರಿ ಲಾವಣ್ಯ ಅತಿಥಿಗಳನ್ನು ಪರಿಚಯಿಸಿ, ಕುಮಾರಿ ಚೈತನ್ಯ ಕಾರ್ಯಕ್ರಮವನ್ನು ನಿರ್ವಹಿಸಿದರು. ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.