ರಾಜಕಾರಣದಿಂದ ನಿವೃತ್ತಿ ಘೋಷಿಸಿದ ಎಸ್.ಅಂಗಾರ

0

ಪ್ರಾಮಾಣಿಕ ರಾಜಕಾರಣಕ್ಕೆ ಇದು ಕಾಲವಲ್ಲ ಎಂಬ ಬೇಸರದ ಮಾತು

ಸುದ್ದಿ ಸಂದರ್ಶನದಲ್ಲಿ ಮನಸ್ಸು ತೆರೆದ ಸಚಿವ

ಸುಳ್ಯ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ, ಸಚಿವ ಎಸ್.ಅಂಗಾರ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದಾರೆ.

ಇಂದು ಅವರ ಮನೆಯಲ್ಲಿ ಸುದ್ದಿಗೆ ವಿಶೇಷ ಸಂದರ್ಶನ ನೀಡಿದ ಅವರು, ತನ್ನ ಮಾತುಗಳಲ್ಲಿ ಈ ಇಂಗಿತ ವ್ಯಕ್ತಪಡಿಸಿದರು.

” ಪಕ್ಷ ಟಿಕೆಟ್ ನೀಡದ ಕುರಿತು ನನ್ನ ಅಸಮಾಧಾನವಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ಕ್ರಮ ಇದಲ್ಲ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ. ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಅದೇ ನನಗೆ ಹಿನ್ನಡೆಯಾಯಿತು ಎಂದು ಹೇಳಿದ ಅಂಗಾರರು, ನಾನು ಇನ್ನು ರಾಜಕಾರಣದಲ್ಲಿಲ್ಲ. ಚುನಾವಣಾ ಪ್ರಚಾರ ಕಣದಲ್ಲೂ ಇಲ್ಲ. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು ಎಂದು ಹೇಳಿದರು.