ಬೆಟ್ಟಂಪಾಡಿ ಮಂಜುನಾಥೇಶ್ವರ ಭಜನಾ ಮಂದಿರದ ವಾರ್ಷಿಕಮಹೋತ್ಸವ-ಅರ್ಧ ಏಕಾಹ ಭಜನೆ

0

ಸುಳ್ಯ ಕಸಬಾದ ಬೆಟ್ಟಂಪಾಡಿ ಶ್ರೀ ಮಂಜುನಾಥೇಶ್ವರ ಭಜನಾ ಮಂದಿರದ ಪ್ರತಿಷ್ಠಾ ವಾರ್ಷಿಕ ಮಹೋತ್ಸವ ಹಾಗೂ ದ್ವಿತೀಯ ವರ್ಷದ ಅರ್ಧ ಏಕಾಹ ಭಜನಾ ಕಾರ್ಯಕ್ರಮ ಇಂದು ಪ್ರಾತ:ಕಾಲ ಆರಂಭಗೊಂಡಿತು.


ಅರ್ಚಕರ ನೇತೃತ್ವದಲ್ಲಿ ಗಣಪತಿ ಹವನವಾಗಿ ಭಜನಾ ಸಂಕೀರ್ತನೆಯು ದೀಪಸ್ಥಾಪನೆಯೊಂದಿಗೆ ಪ್ರಾರಂಭವಾಯಿತು. ತಾಲೂಕಿನ ವಿವಿಧ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಸೇವೆಯು ನಡೆಯಿತು. ಬಳಿಕ ಸಾನಿಧ್ಯದಲ್ಲಿ ನಾಗತಂಬಿಲವಾಗಿ ಮಧ್ಯಾಹ್ನ ಮಹಾಪೂಜೆಯಾಗಿ ಪ್ರಸಾದ ವಿತರಣೆಯಾಗಿ ಸಾರ್ವಜನಿಕ ಅನ್ನ ಸಂತರ್ಪಣೆಯು ನಡೆಯಿತು. ಭಜನಾ ಮಂದಿರದ ಅಧ್ಯಕ್ಷ ರು ಮತ್ತು ಸದಸ್ಯರು ಸರ್ವರನ್ನೂ ಸ್ವಾಗತಿಸಿದರು.