ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ

0

ವಿಶೇಷ ಪೂಜೆ ಸಲ್ಲಿಸಲಿರುವ ಸಿ.ಎಂ.

ಇಂದು ಧರ್ಮಸ್ಥಳ ಹಾಗೂ ಸುಬ್ರಹ್ಮಣ್ಯಕ್ಕೆ ಸಿ.ಎಂ. ಬಸವರಾಜ್ ಬೊಮ್ಮಾಯಿ ಅವರು ತುರ್ತು ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಮೊದಲು ಧರ್ಮಸ್ಥಳಕ್ಕೆ ಆಗಮಿಸಿ ಬಳಿಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ತರಳಿ ಅಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳಾಗುತ್ತಿವೆ.ಚುನಾವಣೆಗೆ ಸಿದ್ದತೆಗಳು ನಡಿತಿದೆ.ಈಗಾಗ್ಲೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಆಗಿದೆ.ಈ ಹಿನ್ನಲೆಯಲ್ಲಿ ಸಿ.ಎಂ.ಅವರು ವೈಯಕ್ತಿವಾಗಿ ದೇಗುಲಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಮಧ್ಯಾಹ್ನ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವರ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಲಿದ್ದಾರೆ.