ಪಕ್ಷೇತರರಾಗಿ ನಂದಕುಮಾರ್ ನಾಮಪತ್ರ ಸಲ್ಲಿಕೆಗೆ ದಿನಾಂಕ ನಿಗದಿ

0

ಸಾವಿರಾರು ಬೆಂಬಲಿಗ ಕಾರ್ಯಕರ್ತರ ರೋಡ್ ಷೋಗೆ ಅಭಿಮಾನಿ ಬಳಗ ತೀರ್ಮಾನ

ಕೆಪಿಸಿಸಿ ವಕ್ತಾರ ನಂದಕುಮಾರ್ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಬಿ ಪಾರಂ ಸಿಗದಿದ್ದಲ್ಲಿ ಪಕ್ಷೇತರರಾಗಿ ಸುಳ್ಯ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆಗೆ ದಿನಾಂಕ ನಿಗದಿಯಾಗಿದೆ ಎಂದು ತಿಳಿದುಬಂದಿದೆ. ಇನ್ನೆರಡು ದಿನಗಳಲ್ಲಿ ನಾಮಪತ್ರ ಸಲ್ಲಿಸಲಿದ್ದು ಈ ಸಂದರ್ಭದಲ್ಲಿ ಮೂರು ಸಾವಿರಕ್ಕೂ ಅಧಿಕ ಕಾರ್ಯಕರ್ತರು, ಬೆಂಬಲಿಗರೊಂದಿಗೆ ಸುಳ್ಯದಲ್ಲಿ ರೋಡ್ ಷೋ ನಡೆಸಿ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಅವರ ಅಭಿಮಾನಿ ಬಳಗದಿಂದ ಕೇಳಿ ಬರುತ್ತಿದೆ. ನಂದಕುಮಾರ್ ರವರನ್ನು ಗೆಲ್ಲಿಸಲು ನಂದಕುಮಾರ್ ಅಭಿಮಾನಿ ಬಳಗದ ಕಾರ್ಯಕರ್ತರು ಸನ್ನದ್ದರಾಗಿದ್ದೇವೆ ಎಂದು ಕೂಡ ಅವರು ತಿಳಿಸಿದ್ದಾರೆ.