ಬೆಟ್ಟಂಪಾಡಿ ಮಂಜುನಾಥೇಶ್ವರ ಭಜನಾ ಮಂದಿರದ ವಾರ್ಷಿಕ ಮಹೋತ್ಸವ-ಅರ್ಧ ಏಕಾಹ ಭಜನೆ

0

ಧಾರ್ಮಿಕ ಸಭೆ – ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

ಸುಳ್ಯ ಕಸಬಾದ ಬೆಟ್ಟಂಪಾಡಿ ಶ್ರೀ ಮಂಜುನಾಥೇಶ್ವರ ಭಜನಾ ಮಂದಿರದ ಪ್ರತಿಷ್ಠಾ ವಾರ್ಷಿಕ ಮಹೋತ್ಸವ ಹಾಗೂ ದ್ವಿತೀಯ ವರ್ಷದ ಅರ್ಧ ಏಕಾಹ ಭಜನೆ ಹಾಗೂ ಧಾರ್ಮಿಕ ಸಭೆ ಮತ್ತು ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ಎ.12 ರಂದು ಭಜನಾ ಮಂದಿರದಲ್ಲಿ ಜರುಗಿತು.

ಪ್ರಾತ:ಕಾಲ ಪುರೋಹಿತ ಶಿವಪ್ರಸಾದ್ ಕೆದಿಲಾಯ ರವರ ನೇತೃತ್ವದಲ್ಲಿ ಗಣಪತಿ ಹವನ ನೆರವೇರಿತು. ಭಜನಾ ಸಂಕೀರ್ತನೆಗೆ ಹಿರಿಯ ಉದ್ಯಮಿ ಕೃಷ್ಣ ಕಾಮತ್ ಅರಂಬೂರು ದೀಪ ಪ್ರಜ್ವಲಿಸಿ ಚಾಲನೆ ನೀಡಿದರು. ಸುಳ್ಯ ತಾಲೂಕಿನ ವಿವಿಧ ಭಜನಾ ಮಂಡಳಿಯ ಸದಸ್ಯರು ಭಜನಾ ಸಂಕೀರ್ತನೆಯಲ್ಲಿ ಪಾಲ್ಗೊಂಡರು.
ನಂತರ ನಾಗನ ಕಟ್ಟೆಯಲ್ಲಿ ನಾಗತಂಬಿಲ ಸೇವೆ ನೆರವೇರಿತು. ಮಧ್ಯಾಹ್ನ ಶ್ರೀ ದೇವರಿಗೆ ಮಹಾಪೂಜೆಯಾಗಿ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆಯಾಯಿತು.


ಸಂಜೆ ಸೂರ್ಯಾಸ್ತದ ವೇಳೆಗೆ ಭಜನಾ ಕಾರ್ಯಕ್ರಮವು ಮಹಾ ಮಂಗಳಾರತಿಯೊಂದಿಗೆ ಸಂಪನ್ನಗೊಂಡಿತು.


ರಾತ್ರಿ ವಿಶೇಷವಾಗಿ ಸಾಮೂಹಿಕ ದುರ್ಗಾ ಪೂಜೆಯು ನಡೆದು ಮಹಾಪೂಜೆಯಾಗಿ ಆಗಮಿಸಿದ ಎಲ್ಲಾ ಭಕ್ತಾದಿಗಳಿಗೆ ಪ್ರಸಾದ ವಿತರಣೆಯಾಗಿ ಅನ್ನ ಸಂತರ್ಪಣೆಯಾಯಿತು.

ಧಾರ್ಮಿಕ ಸಭೆ – ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ರಿಗೆ ಸನ್ಮಾನ

ಧಾರ್ಮಿಕ ಸಭೆಯು ಮಂದಿರದ ಅಧ್ಯಕ್ಷ ಕೆ.ನಾರಾಯಣ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸುಳ್ಯ ರೋಟರಿ ಆಂಗ್ಲ ಮಾಧ್ಯಮ ಶಾಲೆಯ
ಶಿಕ್ಷಕಿ ಶ್ರೀಮತಿ ನಳಿನಾಕ್ಷಿ ವಿ. ಆಚಾರ್ಯ ಕಲ್ಮಡ್ಕ ರವರು ಧಾರ್ಮಿಕ ಉಪನ್ಯಾಸ ನೀಡಿದರು.
ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಶ್ರೀಮತಿ ಲತಾ ಮದುಸೂದನ್,
ಮಂದಿರದ ಸ್ಥಾಪಕಾಧ್ಯಕ್ಷ ಮಲ್ಲೇಶ್ ಬೆಟ್ಟಂಪಾಡಿ ಉಪಸ್ಥಿತರಿದ್ದರು.
ಬೇಬಿ ಯಶ್ವಿಕಾ ಬೆಟ್ಟಂಪಾಡಿ ಪ್ರಾರ್ಥಿಸಿದರು. ಪ್ರಾಸ್ತಾವಿಕ ಮಾತಿನೊಂದಿಗೆ ಮಂದಿರದ ಸ್ಥಾಪಕಾಧ್ಯಕ್ಷ ಮಲ್ಲೇಶ್ ಬೆಟ್ಟಂಪಾಡಿ ಸ್ವಾಗತಿಸಿದರು. ಅವಿ ಸ್ಟುಡಿಯೋ ಮಾಲಕ ಅವಿನ್ ಬೆಟ್ಟಂಪಾಡಿ ಸನ್ಮಾನ ಪತ್ರ ವಾಚಿಸಿದರು. ಗಿರೀಶ್ ಕುಂಟಿನಿ ಕಾರ್ಯಕ್ರಮ ನಿರೂಪಿಸಿದರು.

ಬಳಿಕ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ವೈವಿಧ್ಯಮಯ ಕಾರ್ಯಕ್ರಮ ಹಾಗೂ
ಬಲೆ ತೆಲಿಪಾಲೆ ಖ್ಯಾತಿಯ ಕಲಾಶ್ರೀ ಕುಡ್ಲ ಮಂಗಳೂರು ಕಲಾವಿದರಿಂದ ಕುಸಲ್ದ ಕುರ್ಲರಿ ಹಾಸ್ಯ ಕಾರ್ಯಕ್ರಮ ಪ್ರದರ್ಶನವಾಯಿತು. ಭಜನಾ ಮಂದಿರದ ಆಡಳಿತ ಮಂಡಳಿಯ ಸದಸ್ಯರು, ಮಹಿಳಾ ಭಜನಾ ಮಂಡಳಿಯ ಸದಸ್ಯರು ಹಾಗೂ ಸ್ಥಳೀಯ ಭಕ್ತಾದಿಗಳು ಸಹಕರಿಸಿದರು. ಊರಿನ ಹಾಗೂ ಪರ ಊರಿನ ಭಕ್ತಾದಿಗಳು ಆಗಮಿಸಿದ್ದರು.