ಎ.15 ರಂದು ಹೆಚ್.ಎಂ. ನಂದಕುಮಾರ್ ನಾಮಪತ್ರ ಸಲ್ಲಿಕೆ

0

ಸುಳ್ಯದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಟಿಕೆಟ್ ಕೈತಪ್ಪಿರುವ ಕೆಪಿಸಿಸಿ ಸದಸ್ಯ ಹೆಚ್.ಎಂ.ನಂದಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದು, ಎ.15 ರಂದು ಬೆಳಗ್ಗೆ 1೦ ಗಂಟೆಗೆ ನಾಮಪತ್ರ ಸಲ್ಲಿಸಲ್ಲಿದ್ದಾರೆಂದು ತಿಳಿದುಬಂದಿದೆ.
ಎ.14 ರಂದು ಪೆರುವಾಜೆ ಜಲದುರ್ಗಾ ದೇವಸ್ಥಾನ, ಪಂಜ ಪಂಚಲಿಂಗೇಶ್ವರ ದೇವಸ್ಥಾನ, ಸುಳ್ಯದ ಮೊಗರ್ಪಣೆ ಮಸೀದಿ, ಗಾಂಧಿನಗರ ಮಸೀದಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲ್ಲಿದ್ದಾರೆ.
ಎ.15 ರಂದು ಬೆಳಗ್ಗೆ ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನ, ಸುಳ್ಯದ ಚೆನ್ನಕೇಶವ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅಭಿಮಾನಿಗಳು ಹಾಗೂ ಸ್ನೇಹಿತರ ಜೊತೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆಂದು ತಿಳಿದುಬಂದಿದೆ.