ಎಡಮಂಗಲ : ಬಾಲಕಿಗೆ ಲೈಂಗಿಕ ಕಿರುಕುಳ – ಪೋಕ್ಸೋ ಪ್ರಕರಣ ದಾಖಲು

0

ಎಡಮಂಗಲದ ಕೊಳಂಬೆ ಎಂಬಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಪ್ರಕರಣ ದಾಖಲಾದ ಘಟನೆ ಎ.14 ರಂದು ನಡೆದಿದೆ.
ಎಡಮಂಗಲ ಗ್ರಾಮದ ಕೊಳಂಬೆ ಶಿವರಾಮ ಎಂಬವರು ಅಪ್ರಾಪ್ತ ಬಾಲಕಿಯೊಬ್ಬಳು ಮನೆಯಲ್ಲಿ ಒಬ್ಬಳೆ ಇದ್ದ ಸಂದರ್ಭದಲ್ಲಿ ಮನೆಯೊಳಗೆ ನುಗ್ಗಿ ಬಾಲಕಿಯನ್ನು ಎಳೆದಾಡಿ ಲೈಂಗಿಕ ದೌರ್ಜನ್ಯ ನಡೆಸಿ ನೋವುಂಟು ಮಾಡಿರುವುದಾಗಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.ಆರೋಪಿ ಶಿವರಾಮರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ.