ಉದಯ ಮಣಿಯಾಣಿ ಕೋನಡ್ಕಪದವು ನಿಧನ

0

ಜಾಲ್ಸೂರು ಗ್ರಾಮದ ಕೋನಡ್ಕಪದವು ನಿವಾಸಿ ಉದಯ ಮಣಿಯಾಣಿ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಎ.19ರಂದು ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 49 ವರ್ಷ ವಯಸ್ಸಾಗಿತ್ತು.
ಇತ್ತೀಚಿನ ಕೆಲವು ದಿನಗಳಿಂದ ಅಸೌಖ್ಯದಿಂದ ಇದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಸಂಜೆಯ ವೇಳೆಗೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.
ಮೃತರು ತಾಯಿ ಕುಂಞಮ್ಮ, ಪತ್ನಿ ವಿಶಾಲಾಕ್ಷಿ ಓರ್ವ ಪುತ್ರಿ ವಿದ್ಯಾ , ಸಹೋದರ ಮನು ಎನ್. ಕೋನಡ್ಕಪದವು ಸೇರಿದಂತೆ ಕುಟುಂಬಸ್ಥರನ್ನು ಅಗಲಿದ್ದಾರೆ.