ಸುಬ್ರಹ್ಮಣ್ಯದ ಕಾಂಗ್ರೆಸ್ ಕಛೇರಿಗೆ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ ಭೇಟಿ

0

ಸುಬ್ರಹ್ಮಣ್ಯದ ಕಾಂಗ್ರೆಸ್ ಕಛೇರಿಗೆ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ ಎ.17 ರಂದು ಭೇಟಿ ನೀಡಿದರು.

ಈ ಸಂದರ್ಭ ಪತ್ರಕರ್ತರ ಜತೆ ಮಾತನಾಡಿದ ಅವರು ಸುಳ್ಯದಲ್ಲಿ ಕಾಂಗ್ರೆಸ್‌ನ ಎಲ್ಲರೂ ಒಟ್ಟಾಗಿ ಕೆಲಸ ಮಾಡಲಿದ್ದೇವೆ. ಒಂದೇ ಪಕ್ಷದಲ್ಲಿ ಕೆಲ ಭಿನ್ನಾಭಿಪ್ರಾಯ ಸಹಜ. ಅದನ್ನು ಸರಿ ಮಾಡಲಾಗಿದೆ. ಮುಂದೆ ನಾವೆಲ್ಲ ಒಟ್ಟಾಗಿ ಚುನಾವಣೆ ಪ್ರಚಾರ ಮಾಡಿ ಚುನಾವಣೆ ಎದುರಿಸಲಿದ್ದೇವೆ ಎಂದ ಅವರು ಕಾಂಗ್ರೆಸ್ ಬಗ್ಗೆ ಸುಳ್ಯದಲ್ಲಿ ಉತ್ತಮ ಸ್ಪಂಧನೆ ವ್ಯಕ್ತವಾಗಿತ್ತಿದೆ, ಜನ ಬದಲಾವಣೆ ಬಯಸಿದ್ದಾರೆ ಎಂದರು.

ನಿರೀಕ್ಷಿತ ಅಭಿವೃದ್ಧಿಯಾಗಿಲ್ಲ;


ಸುಳ್ಯದಲ್ಲಿ ಎಸ್.ಅಂಗಾರ ಅವರು ನಿರೀಕ್ಷಿತ ರೀತಿಯಲ್ಲಿ ಅಭಿವೃದ್ಧಿ ನಡೆಸಿಲ್ಲ. ೩೦ ವರ್ಷ ಶಾಸಕರಾಗಿದ್ದರು, ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದರೂ ಅಭಿವೃಧ್ಧಿ ನಿರೀಕ್ಷೆಯಷ್ಟು ನಡೆದಿಲ್ಲ. ಆದ್ದರಿಂದ ಜನರಲ್ಲೂ ಬದಲಾವಣೆ ಬೇಡಿಕೆ ಇದೆ. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನು ಜನತೆ ಗೆಲ್ಲಿಸುವ ವಿಶ್ವಾಸ ಇದೆ ಎಂದು ಅವರು ತಿಳಿಸಿದರು. ಸುಳ್ಯದ ಸಮಗ್ರ ಅಭಿವೃದ್ಧಿಗೆ ಈಗಾಗಲೇ ವಿವಿಧ ಯೋಜನೆಗಳನ್ನು ಹಾಕಿಕೊಂಡಿದ್ದೇನೆ. ಅದರಂತೆ ನಮ್ಮ ಸರಕಾರದ ವತಿಯಿಂದ ಅಭಿವೃದ್ಧಿ ನಡೆಸುತ್ತೇವೆ. ಕಾಂಗ್ರೆಸ್‌ನ ಪ್ರಮುಖರಾದ ಹರೀಶ್ ಇಂಜಾಡಿ, ವಿಮಲಾ ರಂಗಯ್ಯ, ಕೃಷ್ಣಮೂರ್ತಿ ಭಟ್, ಮಾಧವ ಡಿ., ಸುಬ್ರಹ್ಮಣ್ಯ ರಾವ್, ಶೇಷಕುಮಾರ್ ಶೆಟ್ಟಿ, ಪವನ್, ಮೋಹನ್‌ದಾಸ್ ರೈ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಕೃಷ್ಣಪ್ಪ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿ ಶ್ರೀ ದೇವರ ದರುಶನ ಪಡೆದು, ಪ್ರಾರ್ಥನೆ ಸಲ್ಲಿಸಿದರು.