ಕೆ.ವಿ.ಜಿ ನರ್ಸಿಂಗ್ ಸಂಸ್ಥೆಗಳ ವಾರ್ಷಿಕೋತ್ಸವ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಕಾರ್ಯಕ್ರಮ

0

ಕೆ.ವಿ.ಜಿ ನರ್ಸಿಂಗ್ ಸಂಸ್ಥೆಗಳ ವಾರ್ಷಿಕೋತ್ಸವ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಕಾರ್ಯಕ್ರಮವು ಎ .೧೨ ರಂದು ಕೆ.ವಿ.ಜಿ ಮೆಡಿಕಲ್ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಅಧ್ಯಕ್ಷರಾದ ಡಾ.ಕೆ.ವಿ.ಚಿದಾನಂದ ಇವರು ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ಮಂಗಳಾ ಆಸ್ಪತ್ರೆ ಮತ್ತು ಕಿಡ್ನಿ ಫೌಂಡೇಶನ್‌ನ ವೈದ್ಯಕೀಯ ನಿರ್ದೇಶಕರು ಹಾಗೂ ಮಂಗಳಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಡಾ.ಗಣಪತಿ ಭಟ್, ಗೌರವಾನ್ವಿತ ಅತಿಥಿಯಾಗಿ ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ.ನೀಲಾಂಬಿಕೈ ನಟರಾಜನ್ ಉಪಸ್ಥಿತರಿದ್ದರು. ನರ್ಸಿಂಗ್ ಸಂಸ್ಥೆಗಳ ಪ್ರಾಂಶುಪಾಲರುಗಳಾದ ಪ್ರೊ.ಬಿ.ಎಂ.ಪ್ರೇಮ ಹಾಗೂ ಶ್ರೀಮತಿ ಚಂದ್ರಾವತಿ ಕೆ.ಎಸ್ ಇವರು ಪ್ರಥಮ ವರ್ಷದ ಬಿ.ಎಸ್ಸಿ ನರ್ಸಿಂಗ್ ಹಾಗೂ ಜಿ.ಎನ್.ಎಮ್ ವಿದ್ಯಾರ್ಥಿಗಳಿಗೆ ಲ್ಯಾಂಪ್ ಲೈಟಿಂಗ್ ಹಾಗೂ ಪ್ರತಿಜ್ಞಾವಿಧಿಯನ್ನು ನೆರವೇರಿಸಿಕೊಟ್ಟರು, ನರ್ಸಿಂಗ್ ಸುಪರಿಂಟೆಂಡೆಂಟ್ ಶ್ರೀಮತಿ ಪ್ರೇಮಜಾ ಹಾಗೂ ಶ್ರೀಮತಿ ಚಿತ್ರ ಇವರು ಸಹಕರಿಸಿದರು.ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆಯನ್ನು ನಡೆಸಲಾಯಿತು. ಸಭಾ ಕಾರ್ಯಕ್ರಮದ ನಂತರ ಭೋಜನದ ವ್ಯವಸ್ಥೆಯನ್ನು ಮಾಡಲಾಗಿದ್ದು, ಭೋಜನಾನಂತರ ಸಂಸ್ಥೆಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಕಾರ್ಯಕ್ರಮದಲ್ಲಿ ಎ.ಓ.ಎಲ್.ಇ ಇದರ ಕಾರ್ಯದರ್ಶಿ ಶ್ರೀ.ಹೇಮನಾಥ್ ಕುರುಂಜಿ, ಸದಸ್ಯರಾದ ಶ್ರೀಮತಿ ಮೀನಾಕ್ಷಿ ಹೇಮನಾಥ್, ಮೆಡಿಕಲ್ ಕಾಲೇಜಿನ ರೆಜಿಸ್ಟ್ರಾರ್ ಡಾ.ಸಂದೇಶ್ ಕೆ.ಎಸ್., ಸಿ.ಎಫ್.ಒ ಶ್ರೀ ಧನಂಜಯ ಮದುವೆಗದ್ದೆ ಇನ್ನಿತರ ಗಣ್ಯರು, ಪ್ರಥಮ ವರ್ಷದ ವಿದ್ಯಾರ್ಥಿಗಳ ಪೋಷಕರು ಹಾಗೂ ಕಾಲೇಜಿನ ಬೋಧಕ,ಭೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.