ಕೊಲ್ಲಮೊಗ್ರ, ಕಲ್ಮಕಾರು, ಬಾಳುಗೋಡುವಿನಲ್ಲಿ ಕಾಂಗ್ರೆಸ್ ಪ್ರಚಾರ ಸಭೆ

0


ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ನೇತೃತ್ವದಲ್ಲಿ ಪ್ರಚಾರ ಸಭೆ ಕೊಲ್ಲಮೊಗ್ರ, ಕಲ್ಮಕಾರು ಮತ್ತು ಬಾಳುಗೋಡಿನಲ್ಲಿ ಎ.21ರಂದು ನಡೆಯಿತು.


ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷ ಭರತ್ ಮುಂಡೋಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್, ಪಕ್ಷದ ಮುಖಂಡ ಸತೀಶ್ ಕೂಜುಗೋಡು,ಕೀರ್ತನ್ ಕೊಡಪಾಲ ಹಾಗೂ ಸ್ಥಳೀಯ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.


ವಿಧಾನ ಸಭಾ ಚುನಾವಣೆಯನ್ನು ಎದುರಿಸುವ ಬಗ್ಗೆ ಚರ್ಚಿಸಲಾಯಿತು. ಕ್ಷೇತ್ರದ ಅಭಿವೃದ್ಧಿಗಾಗಿ ಅಭ್ಯರ್ಥಿ ಜಿ.ಕೃಷ್ಣಪ್ಪ ರವರನ್ನು ಗೆಲ್ಲಿಸಬೇಕೆಂದು ನಾಯಕರು ಮನವಿ ಮಾಡಿದರು.