ದ್ವಿತೀಯ ಪಿಯುಸಿ ಫಲಿತಾಂಶ : ಅರಂತೋಡು ಎನ್‌ಎಂಪಿಯುಸಿಗೆ ಶೇ. 92.9

0

ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ 185 ವಿದ್ಯಾರ್ಥಿಗಳಲ್ಲಿ 172 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಒಟ್ಟಾರೆ ಫಲಿತಾಂಶ ಶೇ. 92.9 ದಾಖಲಾಗಿದೆ.
ವಿಜ್ಞಾನ ವಿಭಾಗದ 63 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 62 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 98.4 ಫಲಿತಾಂಶ ದಾಖಲಾಗಿದೆ. 17 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 43 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 2 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಕಂಪ್ಯೂಟರ್ ಸೈನ್ಸ್ ವಾಣಿಜ್ಯ ವಿಭಾಗದಲ್ಲಿ ೫೦ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 48 ವಿದ್ಯಾರ್ಥಿಗಳು ಉತ್ತೀರ್ಣರಾಗಿ 96 % ಫಲಿತಾಂಶ ದಾಖಲಾಗಿದೆ. 9 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 12 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, 4 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ 19 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 18 ವಿದ್ಯಾರ್ಥಿಗಳು ಉತ್ತೀರ್ಣರಾಗಿ 94.7 . % ಫಲಿತಾಂಶ ದಾಖಲಾಗಿದ್ದು, 1೦ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, ಓರ್ವ ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.
ಕಲಾ ವಿಭಾಗದಲ್ಲಿ 53 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 44 ವಿದ್ಯಾರ್ಥಿಗಳು ಉತ್ತೀರ್ಣರಾಗಿ 83 % ಫಲಿತಾಂಶ ದಾಖಲಾಗಿದೆ. 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 1೦ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.