ಅಯ್ಯನಕಟ್ಟೆಯ ಪಂಡಿತ್ ದೀನ್ ದಯಾಳ್ ಸಮುದಾಯ ಭವನದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

0

ಕಳಂಜ ಗ್ರಾಮ ಪಂಚಾಯತ್, ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ ಕೋಟೆಮುಂಡುಗಾರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು, ನೇತ್ರಜೋತಿ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಯಶಸ್ವಿ ನಾಗರಿಕ ಸೇವಾ ಸಂಘ ಕಾರ್ಕಳ ಇವುಗಳ ಸಂಯುಕ್ತ ಆಶ್ರಯದಲ್ಲಿ ನೇತ್ರ ವೈದ್ಯರ ನಡೆ ಕಾರ್ಯಕ್ರಮದ ಯೋಜನೆಯಲ್ಲಿ ಸುಳ್ಯ ತಾಲೂಕು ಮಟ್ಟದ ಸರಣಿ ಕಾರ್ಯಕ್ರಮ 23ರಂದು ಅಯ್ಯನಕಟ್ಟೆಯ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಸಮುದಾಯ ಭವನದಲ್ಲಿ ನಡೆಯಿತು.

ಕಳಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಕುಮಾರ್ ಕಿಲಂಗೋಡಿ, ಉಪಾಧ್ಯಕ್ಷ ಗಣೇಶ್ ರೈ, ಪಿ ಡಿ.ಓ ಪದ್ಮಯ ಕೆ, ಶಿಬಿರದ ನಿರ್ದೇಶಕರಾದ ಮುರಳಿಧರ ಸಿ.ಹೆಚ್ ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕೂಸಪ್ಪ ಗೌಡ ಮುಗುಪ್ಪು, ಪ್ರಸಾದ್ ನೇತ್ರಾಲಯ ಕಣ್ಣಿನ ಆಸ್ಪತ್ರೆ ಮಂಗಳೂರು ಇದರ ಪಿ.ಆರ್.ಒ ನಿಶ್ಚಿತ್ ಶೆಟ್ಟಿ, ಪ್ರಸಾದ್ ನೇತ್ರಾಲಯದ ನೇತ್ರ ತಜ್ಞೆ ಡಾ. ಅಂಜಲಿ, ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಬೇಬಿ, ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಕಳಂಜ ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮಸ್ಥರು ಮತ್ತು ನೇತ್ರ ತಪಾಸಣಾ ತಂಡದ ಸದಸ್ಯರು ಈ ಸಂದರ್ಭದಲ್ಲಿ
ಉಪಸ್ಥಿತರಿದ್ದರು.