ಎ.25: ಬೆಳ್ಳಾರೆಯಲ್ಲಿ ಬಿಜೆಪಿ ಅಭ್ಯರ್ಥಿಯಿಂದ ರೋಡ್ ಶೋ ಮತ್ತು ಸಾರ್ವಜನಿಕ ಚುನಾವಣಾ ಪ್ರಚಾರ ಸಭೆ

0

ಭಾರತೀಯ ಜನತಾ ಪಾರ್ಟಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯ ರವರ ಬೃಹತ್ ರೋಡ್ ಶೋ ಹಾಗೂ ಸಾರ್ವಜನಿಕ ಚುನಾವಣಾ ಪ್ರಚಾರ ಸಭೆಯು ಎ.25 ರಂದು ಬೆಳ್ಳಾರೆಯ ಮೇಲಿನ ಪೇಟೆಯಲ್ಲಿ ನಡೆಯಲಿರುವುದು. ಸಂಜೆ ಗಂಟೆ 5.00 ರಿಂದ ಪ್ರಚಾರ ಸಭೆಯು ನಡೆಯಲಿದ್ದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಶ್ರೀಮತಿ ಪಂಕಜ ಎಂ.ಪಾಳ್ವೆ ಇವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಬಿಜೆಪಿ ದ.ಕ.ಜಿಲ್ಲಾ ವಕ್ತಾರ ಜಗದೀಶ ಶೇಣವ ಮತ್ತು ಬಿಜೆಪಿ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯ ಉಪಸ್ಥಿತರಿರುವರು.