ಏ. 25: ಸವಣೂರಿನಲ್ಲಿ ರಶ್ಮಿ ನಿವಾಸ 30ರ‌ ಸಂಭ್ರಮ

0

ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ, ಸವಣೂರಿನ ಶಿಲ್ಪಿ, ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ, ಸಹಕಾರಿ ರತ್ನ ಕೆ. ಸೀತಾರಾಮ ರೈ ಸವಣೂರುರವರ ಸವಣೂರಿನ ರಶ್ಮಿ‌ನಿವಾಸಕ್ಕೆ 30 ವರ್ಷ ತುಂಬಿದ ಹಿನ್ನೆಲೆಯಲ್ಲಿ ರಶ್ಮಿ ನಿವಾಸ 30ರ ಸಂಭ್ರಮ ಕಾರ್ಯಕ್ರಮ ನಾಳೆ ಸವಣೂರಿನ ರಶ್ಮಿ ನಿವಾಸದಲ್ಲಿ ನಡೆಯಲಿದೆ.
ಏ. 25ರಂದು ಪೂ. 8.00ರಿಂದ ಗಣಪತಿ ಹೋಮ, ಸತ್ಯನಾರಾಯಣ ಪೂಜೆ
ಪೂ.10.00ರಿಂದ 12ರ ತನಕ ಶ್ರೀ ರಾಮಕೃಷ್ಣ ಕಾಟುಕುಕ್ಕೆ ಬಳಗದ ದೀಪಾಂಜಲಿ ಮಹಿಳಾ ಭಜನಾ ಮಂಡಳಿ ಶಾಂತಿನಗರ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಬಳಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಒಡಿಯೂರು
ಶ್ರೀ ಗುರುದೇವದತ್ತ ಸಂಸ್ಥಾನಂ ಶ್ರೀ ಕ್ಷೇತ್ರ ಒಡಿಯೂರು ಇಲ್ಲಿನ ಗುರುದೇವಾನಂದ‌ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ದಾಸ ಸಂಕೀರ್ತನಕಾರರಾದ ರಾಮಕೃಷ್ಣ ಕಾಟುಕುಕ್ಕೆಯವರಿಗೆ ಈ ಸಂದರ್ಭದಲ್ಲಿ ಗೌರವಾರ್ಪಣೆ ನಡೆಯಲಿದೆ ಎಂದು ಕೆ. ಸೀತಾರಾಮ ರೈ ಸವಣೂರು ಮತ್ತು ಶ್ರೀಮತಿ ಕಸ್ತೂರಿಕಲಾ ಎಸ್. ರೈಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.