ಹರೀಶ್ ಕುಮಾರ್, ಮಂಜುನಾಥ ಭಂಡಾರಿಯವರಿಂದ ಖರ್ಗೆ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆ

0

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಚುನಾವಣಾ ಪ್ರಚಾರಕ್ಕಾಗಿ ನಾಳೆ ಸುಳ್ಯಕ್ಕೆ ಬರಲಿದ್ದು, ಸುಳ್ಯ ಚೆನ್ನಕೇಶವ ದೇವಸ್ಥಾನದ ಎದುರುಗಡೆ ವಿಶಾಲ ವೇದಿಕೆ ಹಾಗೂ ಪೆಂಡಾಲ್ ಅಳವಡಿಸುವ ಕಾರ್ಯ ನಡೆಯುತ್ತಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯರಾಗಿರುವ ಹರೀಶ್ ಕುಮಾರ್, ವಿ.ಪ.ಸದಸ್ಯ ಮಂಜುನಾಥ ಭಂಡಾರಿ, ಬಾಲರಾಜ್ ಮೊದಲಾದವರು ಬಂದು ಪೂರ್ವಸಿದ್ಧತೆಯನ್ನು ಪರಿಶೀಲಿಸಿದರು.


ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಟಿ.ಎಂ.ಶಹೀದ್, ಚುನಾವಣಾ ಉಸ್ತುವಾರಿ ಎಂ.ವೆಂಕಪ್ಪ ಗೌಡ, ಕೆ.ಎಂ.ಮುಸ್ತಫ, ಪಿ.ಎ.ಮಹಮ್ಮದ್, ಎಸ್.ಸಂಶುದ್ದೀನ್, ಡೇವಿಡ್ ಧೀರ ಕ್ರಾಸ್ತಾ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ್ ಎಸ್.ಕೆ.ಹನೀಫ್ ಮೊದಲಾದವರು ಉಪಸ್ಥಿತರಿದ್ದರು.