ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ

0

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವವು ಎ.26 ರಂದು ನಡೆಯಿತು.


ಬೆಳಿಗ್ಗೆ 108 ತೆಂಗಿನಕಾಯಿ ಗಣಪತಿ ಹೋಮ, ಮಧ್ಯಾಹ್ನ ನವಕ,ಪವಮಾನಾಭಿಷೇಕ, ಮಹಾಪೂಜೆ,ಪ್ರಸಾದ ವಿತರಣೆ ,ಅನ್ನಸಂತರ್ಪಣೆ ನಡೆಯಿತು.


ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಹಾಗೂ ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
ರಾತ್ರಿ ರಂಗಪೂಜೆ,ಪ್ರಸಾದ ವಿತರಣೆ ನಡೆಯಲಿದೆ.