ಕೇರ್ಪಡ ಮಹಿಷಮರ್ದಿನಿ ದೇವಸ್ಥಾನದಲ್ಲಿ ದೇವರ ಪ್ರತಿಷ್ಠಾ ವರ್ಧಂತಿ ಉತ್ಸವ

0

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ದೇವರ ಪ್ರತಿಷ್ಠಾ ವರ್ಧಂತಿ ಉತ್ಸವವು ಎ.೨೬ರಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.


ಎ.೨೬ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಮಹಾಗಣಪತಿ ಹೋಮ ಮುಂತಾದ ವೈದಿಕ ಕಾರ್ಯಗಳು ನಡೆಯಿತು. ಮಧ್ಯಾಹ್ನ ಶ್ರೀ ದೇವರಿಗೆ ಸಾನಿಧ್ಯ ಕಲಶಾಭಿಷೇಕ,ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಸಂಜೆ ಭಜನಾ ಕಾರ್ಯಕ್ರಮ,ದೇವತಾ ಪ್ರಾರ್ಥನೆ, ಸೇವಾ ರಂಗಪೂಜೆ,ಮಹಾಪೂಜೆ,ಅನ್ನಸಂತರ್ಪಣೆ ನಡೆಯಿತು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ ಶ್ರೀ ಮಹಿಷಮರ್ದಿನಿ ಯಕ್ಷಗಾನ ಅಧ್ಯಯನ ಕೇಂದ್ರ ಕೇರ್ಪಡ ಇಲ್ಲಿಯ ವಿದ್ಯಾರ್ಥಿಗಳಿಂದ ರಂಗಪ್ರವೇಶ ಮತ್ತು ಪ್ರದರ್ಶನ ನಡೆಯಿತು.