ಅಮರಮುಡ್ನೂರು ಪಂಚಾಯತ್ ನಲ್ಲಿ ಸಿಬ್ಬಂದಿ ವರ್ಗದವರಿಗೆ ಚುನಾವಣಾ ಪೂರ್ವ ಸಿದ್ಧತಾ ಸಭೆ

0

ಅಮರಮುಡ್ನೂರು ಗ್ರಾಮ ಪಂಚಾಯತ್ ನಲ್ಲಿ 2023 ರ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಂಚಾಯತ್ ಸಿಬ್ಬಂದಿಗಳಿಗೆ ಕರ್ತವ್ಯಕ್ಕೆ ಹಾಜರಾಗುವ ಸಲುವಾಗಿ ಪೂರ್ವ ಸಿದ್ಧತೆಯ ಕುರಿತು ಪಂಚಾಯತ್ ಸಭಾಭವನದಲ್ಲಿ ಸಭೆ ನಡೆಸಲಾಯಿತು.
ಮೇ.10 ರಂದು ನಡೆಯುವ ಮತದಾನ ಸಂದರ್ಭದಲ್ಲಿ ಗ್ರಾಮದ ಬೂತ್ ಗಳಲ್ಲಿ ಸಿಬ್ಬಂದಿಗಳ ಕರ್ತವ್ಯದ ಬಗ್ಗೆ ನಿರ್ದೇಶನವನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ನೀಡಿದರು. ಗ್ರಾಮ ಲೆಕ್ಕಾಧಿಕಾರಿ ಕಚೇರಿಯ ಸಿಬ್ಬಂದಿ ಮತ್ತು ಸ್ಥಳೀಯ ಆಶಾ ಕಾರ್ಯಕರ್ತೆ ಯರು, ಆರೋಗ್ಯ ಸಹಾಯಕಿಯರು, ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.