ಬಿಜೆಪಿ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಕೊಟ್ಟ ಮಾತು ಪಾಲಿಸಿದೆ : ಕಟೀಲ್

0

ಮತಾಂಧರ ಕೃತ್ಯಕ್ಕೆ ಪ್ರವೀಣ್ ನೆಟ್ಟಾರು ಬಲಿಯಾದದ್ದು ನೋವಿನ ಸಂಗತಿ. ಇದಕ್ಕೆ ಪ್ರತಿಫಲವಾಗಿ ಏನೂ ಕೊಡಲು ಸಾಧ್ಯವಿಲ್ಲ. ಆದರೆ ಬಿಜೆಪಿ ಪ್ರವೀಣ್ ಕುಟುಂಬಕ್ಕೆ ಏನು ಮಾತು ಕೊಟ್ಟಿದೆಯೋ ಅದನ್ನು ಪಾಲಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್‌ಕುಮಾರ್ ಕಟೀಲ್ ಹೇಳಿದರು.


ಪ್ರವೀಣ್ ನೆಟ್ಟಾರು ಕನಸಿನ ಮನೆಯ ಗೃಹಪ್ರವೇಶ ಸಮಾರಂಭದಲ್ಲಿ ಭಾಗವಹಿಸಿ ಪುತ್ಥಳಿ ಅನಾವರಣದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ್ ನೆಟ್ಟಾರು ಆರೋಪಿಗಳನ್ನು ಬಂಧಿಸಲಾಗಿದೆ. ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಲಾಗಿದೆ. ಪ್ರವೀಣ್ ಪತ್ನಿಗೆ ಸರಕಾರಿ ಉದ್ಯೋಗ ನೀಡಲಾಗಿದೆ. ಇದೀಗ ಆ ಕುಟುಂಬಕ್ಕೆ ನೂತನ ಮನೆಯನ್ನು ನಿರ್ಮಿಸಿಕೊಡಲಾಗಿದೆ. ಈ ಮನೆ ಅವರಿಗೆ ಸಮಾಧಾನ ತಂದಿದೆ ಎಂದು ಹೇಳಿದರು.