ಗೂನಡ್ಕ, ಪೆಲ್ತಡ್ಕ ಭಾಗದ ಮನೆಗಳಿಗೆ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಿತರಣೆ

0

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಒಂದನೇ ವಾರ್ಡಿನ ಗೂನಡ್ಕ, ಪೆಲ್ತಡ್ಕ ಭಾಗದ 21 ಮನೆಗಳಿಗೆ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ಗಳನ್ನು ವಿತರಿಸಿ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪರವರ ಪರ ಮತಯಾಚಿಸಲಾಯಿತು.

ಈ ಸಂದರ್ಭ ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೋಮಶೇಖರ್ ಕೊಯಿಂಗಾಜೆ, ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞ ಗೂನಡ್ಕ, ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಲಿಸ್ಸಿ ಮೊನಾಲಿಸಾ, ಪ್ರಮುಖರಾದ ಸಿಲ್ವಸ್ಟರ್ ಡಿ’ಸೋಜಾ, ಕೆರೋಲಿನ್ ಕ್ರಾಸ್ತಾ ಉಪಸ್ಥಿತರಿದ್ದರು.