ಕೆರೆಯಲ್ಲಿದ್ದ ಪಾಚಿ ತೆಗೆಯಲು ಹೋದ ಯುವಕ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತ್ಯು

0

ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ತಾಡಿ ಗ್ರಾಮದಲ್ಲಿ ಕೆರೆಯ ಪಾಚಿ ತೆಗೆಯಲು ಹೋದ ಯುವಕ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ. ಕಾಪುತಮೂಲೆ ನಿವಾಸಿ ಮೋನಪ್ಪ ನಾಯ್ಕ ಎಂಬವರ ಪುತ್ರ ಗೋಪಾಲಕೃಷ್ಣ ಕೆ.(34 ವ.) ಮೃತಪಟ್ಟ ಯುವಕ.ಆಕಸ್ಮಿಕವಾಗಿ ಕಾಲು ಜಾರಿ ಕೆರೆಯ ನೀರಿಗೆ ಬಿದ್ದು ಈಜು ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟ ಬಗ್ಗೆ ಮೃತರ ತಂದೆ ನೀಡಿದ ದೂರಿನಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.
ಮೃತ ಗೋಪಾಲಕೃಷ್ಣ ಅವರು ಪಡುಬಿದ್ರೆಯ ಅದಾನಿ ಪವರ್ ಲಿಮಿಟೆಡ್ ಯಪಿಎಸ್‌ಎಲ್ ಇಲ್ಲಿ ಇಲೆಕ್ಟ್ರಿಕಲ್ ಮೆಂಟೈನೆನ್ಸ್ ಟೆಕ್ನಿಶಿಯನ್ ಆಗಿ ಕೆಲಸ ಮಾಡುತ್ತಿದ್ದು,ವಾರದ ರಜಾದಿನವಾದ ಗುರುವಾರದಂದು ಮನೆಯಲ್ಲಿ ಇದ್ದ ವೇಳೆ ಕೆರೆಯ ಪಾಚಿ ತೆಗೆಯಲು ಹೋಗಿದ್ದು ಈ ವೇಳೆ ದುರ್ಘಟನೆ ನಡೆದಿದೆ ಎನ್ನಲಾಗಿದೆ.