ಬೊಳುಬೈಲು : ಕಾಂಗ್ರೆಸ್ ಕಾರ್ಯಕರ್ತರಿಂದ ಮನೆ ಮನೆ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಿತರಣೆ ಹಾಗೂ ಮತಯಾಚನೆ

0

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಜಿ ಕೃಷ್ಣಪ್ಪ ಅವರ ಪರವಾಗಿ ಬೂತ್ ನಂ 183 ಬೊಳುಬೈಲು ವಾರ್ಡ್ನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಮತಯಾಚಿಸಿದರು.
ಈ ಸಂದರ್ಭದಲ್ಲಿ ಬೂತ್ ಅಧ್ಯಕ್ಷರಾದ ಸುಮತಿ ಹುಲಿಮನೆ, ಸುಳ್ಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಮುಜೀಬ್ ಪೈಚಾರ್, ಸುಳ್ಯ ಬ್ಲಾಕ್ ಯುವ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಮಿಸ್ ಭಾ ಪೈಚಾರ್ ಹಾಗೂ ಸುಮಂದಿನಿ ಬೊಳುಬೈಲು ಮೊದಲಾದವರು ಉಪಸ್ಥಿತರಿದ್ದರು.