ಸುಳ್ಯವನ್ನು ಮಾದರಿ ಕ್ಷೇತ್ರವನ್ನಾಗಿಸುವುದೇ ನಮ್ಮ ಗುರಿ

0

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಸುಂದರ ಮೇರ


ರಸ್ತೆ, ಸೇತುವೆ, ಪ್ರವಾಸೋದ್ಯಮ, ಶಿಕ್ಷಣ ಹೀಗೆ ಸುಳ್ಯದಲ್ಲಿ ಎಲ್ಲ ಬಗೆಯ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಸುಳ್ಯ ಕ್ಷೇತ್ರವನ್ನು ರಾಜ್ಯದಲ್ಳೇ ಮಾದರಿ ತಾಲೂಕನ್ನಾಗಿ ಮಾಡಬೇಕೆನ್ನುವುದೇ ನಮ್ಮ ಗುರಿ. ಅದಕ್ಕಾಗಿ ಈ ಬಾರಿಯ ಚುನಾವಣೆಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುತ್ತಿದ್ದು ಜನರು ನನ್ನನ್ನು ಬೆಂಬಲಿಸುತ್ತಾರೆಂಬ ವಿಶ್ವಾಸ ಇದೆ ಎಂದು ಅಭ್ಯರ್ಥಿ ಸುಂದರ ಮೇರ ತಿಳಿಸಿದ್ದಾರೆ.


ಎ.೨೯ರಂದು ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಎಲ್‌ಐಸಿ ಅಭಿವೃದ್ಧಿ ಅಧಿಕಾರಿಯಾಗಿದ್ದ ನಾನು ಇದೀಗ ನಿವೃತ್ತಗೊಂಡಿದ್ದು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿzವೆ. ಈ ಬಾರಿ ಸುಳ್ಯ ಕ್ಷೇತ್ರದಿಂದ ವಿಧಾನ ಸಭಾ ಚುನಾವಣೆಗೆ ಸ್ಪರ್ಧಿಸುತ್ತಿzನೆ. ಸುಳ್ಯ ತಾಲೂಕು ಸರಕಾರಿ ಆಸ್ಪತ್ರೆಯನ್ನು ಆಧುನೀಕರಣಗೊಳಿಸಿ ಮೇಲ್ದರ್ಜೆಗೆ ಏರಿಸಲಾಗುವುದು. ಹಳ್ಳಿ ಹಳ್ಳಿಗಳ ರಸ್ತೆ, ಕಾಲು ಸಂಕಗಳ ಅಭಿವೃದ್ಧಿ ಪಡಿಸುತ್ತೇವೆ. ಜನರನ್ನು ಕಾಡುತ್ತಿರುವ ನೀರಿನ ಸಮಸ್ಯೆ, ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತೇವೆ. ವಸತಿ ಯೋಜನೆಯ ಮೂಲಕ ಅರ್ಹ ಫಲಾನುಭವಿಗಳಿಗೆ ನಿವೇಶನ ಒದಗಿಸಲಾಗುವುದು. ಅಡಿಕೆ ಬೆಳೆಗಾರರ ಹಳದಿ ರೋಗ ಮತ್ತು ಎಲೆ ಚುಕ್ಕಿ ರೋಗಕ್ಕೆ ಪರಿಹಾರಕ್ಕೆ ಆದ್ಯತೆ ನೀಡಲಾಗುವುದು. ಪ್ರಾಥಮಿಕ, ಪ್ರೌಢ, ಕಾಲೇಜು ಉನ್ನತ ಶಿಕ್ಷಣಕ್ಕೆ ಆದ್ಯತೆ, ಪ್ರವಾಸೋದ್ಯಮ ಪ್ರದೇಶವಾಗಿ ಸುಳ್ಯವನ್ನು ಅಭಿವೃದ್ಧಿ ಪಡಿಸಲಾಗುವುದು. ಬಡವರ ವೈದ್ಯಕೀಯ ಆರೈಕೆಗಾಗಿ ಹೆಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ತೆರೆಯಲು ಪ್ರಯತ್ನಿಸಲಾಗುವುದು. ಸುಳ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿ ಸ್ಥಳೀಯರಿಗೆ ಉದ್ಯೋಗ ಅವಕಾಶ ಕಲ್ಪಿಸಲಾಗುವುದು. ಸುಳ್ಯ ನಗರದ ಅಭಿವೃದ್ಧಿಯೊಂದಿಗೆ ಬೈಪಾಸ್ ನಿರ್ಮಾಣ ಮಾಡಲಾಗುವುದು. ಸುಳ್ಯ ಕ್ರೀಡಾಂಗಣವನ್ನು ಅಭಿವೃದ್ಧಿ ಪಡಿಸಿ ಸಾರ್ವಜನಿಕ ಉಪಯೋಗಕ್ಕೆ ಅವಕಾಶ ಕಲ್ಪಿಸಲಾಗುವುದು ಹೀಗೆ ಹಲವು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ಅವರು ಹೇಳಿದರು.


ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಕರುಣಾಕರ ಪಲ್ಲತಡ್ಕ, ಅಶೋಕ್ ಕುಂಚಾಡಿ, ಸುಂದರ ನಿಡ್ಪಳ್ಳಿ, ಜಯಪ್ರಕಾಶ್ ಕನ್ಯಾಡಿ, ಸೀತಾರಾಮ ಕುಂಚಾಡಿ, ವಸಂತ ಛತ್ರಪ್ಪಾಡಿ, ಅಭಿಷೇಕ್ ಸುಳ್ಯ ಇದ್ದರು.