ಬೆಳ್ಳಾರೆ: ಗೌರಿಪುರಂ ದೇವಸ್ಥಾನದಲ್ಲಿ ವಾರ್ಷಿಕೋತ್ಸವ ಬಗ್ಗೆ ಪೂರ್ವಭಾವಿ ಸಭೆ

0

ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ನಾಗ ದೇವರ ಸನ್ನಿಧಿಯಲ್ಲಿ ಮೇ. 26-27ರಂದು ನಡೆಯಲಿರುವ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಚಂಡಿಕಾ ಹೋಮ ಕಾರ್ಯಕ್ರಮದ ಬಗ್ಗೆ ಪೂರ್ವಭಾವಿ ಸಭೆ ಏ. 30ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು.

ಟ್ರಸ್ಟ್‌ನ ಅಧ್ಯಕ್ಷ ಚಂದ್ರಹಾಸ ಮಣಿಯಾಣಿ, ಕಾರ್ಯದರ್ಶಿ ಮಹಾಲಿಂಗ ಪಾಟಾಳಿ ಕೋಶಾಧಿಕಾರಿ ಆನಂದ ಪಡ್ಪು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಟ್ರಸ್ಟ್‌ನ ಪದಾಧಿಕಾರಿಗಳು,
ಜೀರ್ಣೋದ್ಧಾರ ಸಮಿತಿಯ
ಸದಸ್ಯರು ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು.