ಸುಬ್ರಹ್ಮಣ್ಯ: ಅಪರಿಚಿತ ವ್ಯಕ್ತಿಯ ಶವ ಪತ್ತೆ

0

ಗುರುತಿಗಾಗಿ ಮನವಿ

ಮೇ.2ರಂದು ಪೂರ್ವಾಹ್ನ ಸುಮಾರು ಗಂಟೆ 8.00 ರ ಸಮಯಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ರಥಬೀದಿ ಬಳಿ ಸುಮಾರು 55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೋರ್ವರ ಶವ ಪತ್ತೆಯಾಗಿದೆ.

ಈ ಸಂಬಂಧ ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದರು. ಶವವನ್ನು ಸುಳ್ಯ ಕೆ.ವಿ.ಜಿ ಮೆಡಿಕಲ್ ಕಾಲೇಜಿನ ಶವಾಗಾರದಲ್ಲಿ ಇರಿಸಲಾಗಿದ್ದು ಸಂಬಂಧಿಸಿದವರು ಸುಬ್ರಹ್ಮಣ್ಯ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.