ಸುಳ್ಯ ರಾಘವೇಂದ್ರ ಮಠದ ಬಳಿಯ ತೋಟದಲ್ಲಿ ವಿದ್ಯುತ್ ಶಾರ್ಟ್ ನಿಂದ ಬೆಂಕಿ ಅವಘಡ

0

ಸುಳ್ಯದ ಪಯಸ್ವಿನಿ ನದಿ ತೀರದಲ್ಲಿ ಇರುವ ಶ್ರೀ ಗುರು ರಾಘವೇಂದ್ರ ಮಠದ ಪಕ್ಕದ ತೋಟದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಘಟನೆ ವರದಿಯಾಗಿದೆ.
ಮಠದ ಸಮೀಪದಲ್ಲಿ ಡಾ.ಪಾರೆ ಯವರಿಗೆ ಸೇರಿದ ತೋಟದಲ್ಲಿ ಅವಘಡ ನಡೆದಿದ್ದು ಬೆಂಕಿಯಿಂದ ಅನಾಹುತ ಸಂಭವಿಸುವ ಮೊದಲು ತಕ್ಷಣ ಸ್ಥಳೀಯರು ಅಗ್ನಿ ಶಾಮಕ ದಳದವರಿಗೆ ವಿಷಯ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಸಿ ಕೊಂಡಿದ್ದು ದೊಡ್ಡ ಪ್ರಮಾಣದ ಹಾನಿ ಸಂಭವಿಸಲಿಲ್ಲ ಎಂದು ತಿಳಿದು ಬಂದಿದೆ.