ಮೇ.19-20; ದೇವರಕಾನ ಶ್ರೀ ಲಕ್ಷ್ಮಿನರಸಿಂಹ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವ

0


ಮುರುಳ್ಯ ಗ್ರಾಮದ ದೇವರಕಾನ ಶ್ರೀ ಲಕ್ಷ್ಮಿ ನರಸಿಂಹ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ ಮೇ.19 ಮತ್ತು 20ರಂದು ನೀಲೇಶ್ವರ ಕೆ.ಯು.ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.
ಮೇ.19ರಂದು ಸಂಜೆ ತಂತ್ರಿಗಳ ಆಗಮನ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,ಬಳಿಕ ವಿವಿಧ ವೈಧಿಕ ಕಾರ್ಯಕ್ರಮಗಳು,ಮಹಾಪೂಜೆ,ಅನ್ನಸಂತರ್ಪಣೆ ನಡೆಯಲಿದೆ.ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕಾಯರ್ತಡ್ಕ ಮತ್ತು ಮುರುಳ್ಯ ಶಾಲಾ ಮಕ್ಕಳಿಂದ ನೃತ್ಯ ಕಾರ್ಯಕ್ರಮ, ವಿದುಷಿ ಪಾರ್ವತಿ ಗಣೇಶ್ ಭಟ್ ಹೊಸಮೂಲೆ ಮತ್ತು ಬಳಗದವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.
ಮೇ.20ರಂದು ಬೆಳಿಗ್ಗೆ ಗಣಪತಿ ಹವನ, ಬಿಂಬ ಶುದ್ಧಿ, ಕಲಶಪೂಜೆ, ಕಲಶಾಭಿಷೇಕ, ಮಧ್ಯಾಹ್ನ ಪೂಜೆ, ಬಲಿ ಹೊರಡುವುದು,ದರ್ಶನ ಬಲಿ,ಬಟ್ಟಲು ಕಾಣಿಕೆ,ಮಂಗಳಾರತಿ, ಮಂತ್ರಾಕ್ಷತೆ,ಸಂಪ್ರೋಕ್ಷಣೆ,ತೀರ್ಥಪ್ರಸಾದ,ಅನ್ನಸಂತರ್ಪಣೆ ನಡೆಯಲಿದೆ.