ನಾಳೆ ವಿಧಾನಸಭಾ ಚುನಾವಣೆ

0

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಕಲ ಸಿದ್ಧತೆ


ಎನ್ನೆಂಸಿಯಲ್ಲಿ ಮಸ್ಟರಿಂಗ್ ಕಾರ್ಯನಾಳೆ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್ ಕೇಂದ್ರ ಸುಳ್ಯದ ನೆಹರೂ ಸ್ಮಾರಕ ಕಾಲೇಜಾಗಿದ್ದು, ಇಲ್ಲಿ ಮಸ್ಟರಿಂಗ್ ಕಾರ್ಯ ನಡೆಯುತ್ತಿದ್ದು, ಮಧ್ಯಾಹ್ನ ವೇಳೆಗೆ ನಿಯುಕ್ತಿಗೊಂಡ ಎಲ್ಲರೂ ಮತಕೇಂದ್ರಗಳಿಗೆ ತೆರಳಲಿದ್ದಾರೆ.
ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಅರುಣ್‌ಕುಮಾರ್ ಸಂಗಾವಿ, ಸಹಾಯಕ ಚುನಾವಣಾಧಿಕಾರಿಗಳಾದ ಜಿ. ಮಂಜುನಾಥ್ ಮತ್ತು ರಮೇಶ್ ಬಾಬು ನೇತೃತ್ವದಲ್ಲಿ ಚುನಾವಣೆಗೆ ಸಕಲ ವ್ಯವಸ್ಥೆ ಮಾಡಲಾಗಿದೆ.


ಮತಗಟ್ಟೆ ಅಧಿಕಾರಿಗಳು, ಸಿಬ್ಬಂದಿಗಳು, ಪೊಲೀಸ್ ಸಿಬ್ಬಂದಿಗಳು, ವಾಹನ ಚಾಲಕರಿಗೆ ಸೂಚನೆ ನೀಡಲಾಗಿದ್ದು, ಸಂಬಂಧಪಟ್ಟವರಿಂದ ಮಾಹಿತಿ ಪಡೆದ ಅವರು ಅಪರಾಹ್ನ ಸುಳ್ಯ ವಿಧಾನಸಭಾ ಕ್ಷೇತ್ರದ ೨೩೧ ಬೂತ್‌ಗಳಿಗೂ ತೆರಳಲಿದ್ದಾರೆ.


ಮತದಾನಕ್ಕೆ ಸಂಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮತದಾರರು ನಿರ್ಭೀತರಾಗಿ ಮತ ಚಲಾಯಿಸಬೇಕು ಎಂದು ಚುನಾವಣಾಧಿಕಾರಿ ಅರುಣ್‌ಕುಮಾರ್ ಸಂಗಾವಿ ಮನವಿ ಮಾಡಿದರು.