ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ನೂತನ ಶಾಸಕಿ ಕು.ಭಾಗಿರಥಿ ಮುರುಳ್ಯ ಭೇಟಿ

0

ಕಾರ್ಯಕರ್ತರ ಶ್ರಮದಿಂದ ನಾನು ಪ್ರಚಂಡ ಬಹುಮತದಿಂದ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ವಿಜಯಿಯಾಗಲು ಕಾರಣವಾಗಿದೆ‌ ಎಂದು ಸುಳ್ಯದ ನೂತನ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ.

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ದೇವಳ ವಠಾರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಜನರ ಮೂಲಭೂತ ಬೇಡಿಕೆಗಳಿಗೆ ತಕ್ಷಣ ಸ್ಪಂದಿಸುವ ಕೆಲಸ ಮಾಡುತ್ತೇನೆ. ಅಭಿವೃದ್ಧಿ ಕೆಲಸಗಳಿಗೆ ಜನರ ಸಹಕಾರ ಬೇಕೆಂದು ಅವರು ಹೇಳಿದರು.


ಈ ಸಂದರ್ಭದಲ್ಲಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಉಳುವಾರು,ಎಪಿಯಂಸಿ ಮಾಜಿ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ,ಅರಂತೋಡು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಕೇಶವ ಅಡ್ತಲೆ,ತೊಡಿಕಾನ ಭೂತ್ ಸಮಿತಿ ಅಧ್ಯಕ್ಷ ಪ್ರಶಾಂತ್ ಕಾಪಿಲ,ವಿಶ್ವ ಹಿಂದು ಪರಿಷತ್ ಅಧ್ಯಕ್ಷ ಸೋಮಶೇಖರ ಪೈಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅರಂತೋಡು ತೊಡಿಕಾನ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಸ್ವಾಗತಿಸಿದರು.ಬಿಜಿಪಿ ಮಂಡಲ ಸಮಿತಿ ಸದಸ್ಯ ಚಂದ್ರಶೇಖರ ಆಚಾರ್ಯ ವಂದಿಸಿದರು.ತೊಡಿಕಾನ ಶ್ರೀ ಮಲ್ಲಿಕಾರ್ಜನ ದೇವಳದ ವತಿಯಿಂದ ನೂತನ ಶಾಸಕಿಯನ್ನು ವ್ಯವಸ್ಥಾಪನಾ ಸಮಿತಿಯವರು ಅಭಿನಂದಿಸಿದರು.ಅರಂತೋಡು ತೊಡಿಕಾನ ಬಿಜೆಪಿ ಕಾರ್ಯಕರ್ತರು ಬಿಜೆಪಿ ಅಭಿಮಾನಿಗಳು ಉಪಸ್ಥಿತರಿದ್ದರು.