ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಸಭಾಭವನದಲ್ಲಿ ಗಣಹೋಮ

0

ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನೂತನ ಸಭಾಭವನ ನಿರ್ಮಾಣವಾಗಿದ್ದು ಮೇ.17 ರಂದು ಗಣಹೋಮ ನಡೆಯಿತು.
ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಉದಯಕುಮಾರ್ ಕೆ.ಟಿ.ಪೂಜಾಕಾರ್ಯ ನೆರವೇರಿಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶ್ರೀರಾಮ ಪಾಟಾಜೆ,ಉಪಾಧ್ಯಕ್ಷ ಅಬ್ದುಲ್ ರಹಮಾನ್, ನಿರ್ದೇಶಕರಾದ ಕರುಣಾಕರ ಆಳ್ವ,ಶಾರದಾ ರೈ,ನಿರ್ಮಲ ರೈ, ಸಾವಿತ್ರಿ , ಸುಂದರ ಹಾಗೂ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಜಯ ರೈ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.