ಜೆಡಿಎಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿದೇವೇಗೌಡರ ಹುಟ್ಟು ಹಬ್ಬ ಆಚರಣೆ

0

ಮೇ.18ರಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ 93 ನೇ ಹುಟ್ಟುಹಬ್ಬವನ್ನು ಸುಳ್ಯದ ಜೆಡಿಎಸ್ ಕಾರ್ಯಾಲಯದಲ್ಲಿ ಆಚರಿಸಲಾಯಿತು.

ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡರ ಉಪಸ್ಥಿತಿಯಲ್ಲಿ ಸರಳವಾಗಿ ಆಚರಿಸಲಾಯಿತು. ದೇವೇಗೌಡರ ಬಗ್ಗೆ ಮಾತನಾಡಿ ಅವರಿಗೆ ಶುಭ ಹಾರೈಸಿದರು. ಪಕ್ಷದ ತಾಲೂಕು ಅಧ್ಯಕ್ಷರಾದ ಸುಕುಮಾರ್ ಕೋಡ್ತುಗುಳಿ, ಕಾರ್ಯದರ್ಶಿ ರಾಕೇಶ್ ಕುಂಟಿಕಾನ, ಗೋಪಾಲ್ ಗೌಡ, ರಾಮಚಂದ್ರ ಗೌಡ, ಖಾದರ್ ಮೊಟ್ಟೆಂಗಾರ್, ಕಾರ್ತಿಕ್ ಕಡಬ ಇವರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.