ತಂದೆ, ಮಗನ ಹೊಡೆದಾಟ ತಂದೆಯ ಸಾವಿನಲ್ಲಿ ಪರ್ಯವಸಾನ

0

ಒಂದು ವಾರದ ಹಿಂದೆ ನಡೆದ ಹೊಡೆದಾಟ

ಗಾಯಾಳು ತಂದೆ ಆಸ್ಪತ್ರೆಯಲ್ಲಿ ಮೃತ್ಯು

ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕದಲ್ಲಿ ತಂದೆ – ಮಗನ ಹೊಡೆದಾಟದಲ್ಲಿ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಂದೆ ಮೃತಪಟ್ಟ ಘಟನೆ ನಡೆದಿದೆ.

ಕಿಟ್ಟುರವರ ಮೊದಲನೆ ಹೆಂಡತಿಯ ಮಗ ಹರ್ಷಿತ್ ಎಂಬಾತನು ಮನೆಗೆ ಬಂದು ಅಡಿಕೆ ಮರದ ಸಲಾಕೆಯಿಂದ ತಂದೆಗೆ ಹೊಡೆದಿದ್ದರು.
ಗಾಯಗೊಂಡಿದ್ದ ಕಿಟ್ಟುರವರನ್ನು ಆಂಬ್ಯುಲೆನ್ಸ್ ಮೂಲಕ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.


ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ನಿತ್ಯಾನಂದರವರು ದೂರು ನೀಡಿದ್ದು ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ.
ಹಳೆಯ ದ್ವೇಷದ ಕಾರಣದಿಂದ ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ.