ದೇವಚಳ್ಳದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

0

ದೇವಚಳ್ಳ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೂಲಕ ನಡೆದ ‘ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ‘ ವನ್ನು ಗ್ರಾಮ ಪಂಚಾಯತ್ ಸದಸ್ಯರಾದ ಶೈಲೇಶ್ ಅಂಬೆಕಲ್ಲು ಉದ್ಘಾಟಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಂಶುಪಾಲರಾದ ಬಾಬು ಮಾಸ್ಟರ್ ಅಚ್ರಪ್ಪಾಡಿ ಮಕ್ಕಳಿಗೆ ಶುಭ ಹಾರೈಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಶಿಬಿರದ ಸಂಪನ್ಮೂಲ ವ್ಯಕ್ತಿ ಯೋಗ ಶಿಕ್ಷಕರು ಕೃಷ್ಣಪ್ರಸನ್ನರವರು ಹಾಗೂ ಸಮುದಾಯ ಆರೋಗ್ಯಧಿಕಾರಿ ಕುಮಾರಿ ಮೋನಿಷಾರವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಗ್ರಂಥಾಲಯದ ಮೇಲ್ವಿಚಾರಕಿ ಶ್ರೀಮತಿ ಪ್ರಫುಲ್ಲ ಶ್ರೀಕಾಂತ್ ಪಾರೆಪ್ಪಾಡಿ ನಿರೂಪಿಸಿದರು. ತದನಂತರ ಯೋಗ ಶಿಕ್ಷಕರು ಮಕ್ಕಳಿಗೆ ಯೋಗ ತರಬೇತಿ ನೀಡಿದರು. ನಂತರ ಗ್ರಂಥಾಲಯದ ಮೇಲ್ವಿಚಾರಕಿ ಮಕ್ಕಳಿಗೆ ವಿವಿಧ ಚಟುವಟಿಕೆಗಳನ್ನು ಕೈಗೊಂಡರು.