ನಾಳೆ (ಮೇ.21) : ಪ್ರಣವ ಸೌಹಾರ್ದ ಸಹಕಾರಿ ಸಂಘದ ಮೈಸೂರು ಶಾಖೆ ಉದ್ಘಾಟನೆ

0


ಮಂಗಳೂರಿನ ಯೆಯ್ಯಾಡಿಯಲ್ಲಿ ಕಾರ್ಯಚರಿಸುತ್ತಿರುವ ಪ್ರಣವ ಸೌಹಾರ್ದ ಸಹಕಾರಿ ಸಂಘದ 7ನೇ ಶಾಖೆ ಮೈಸೂರಿನ ಶ್ರೀರಾಮಪುರದಲ್ಲಿ ನಾಳೆ (ಮೇ.21) ರಂದು ಸಂಜೆ 6 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಜೀ ಯವರು ನೂತನ ಶಾಖೆ ಉದ್ಘಾಟಿಸಿ ಆರ್ಶೀವಚನ ನೀಡಲಿದ್ದಾರೆ. ಪ್ರಣವ ಸೌಹಾರ್ದ ಸಹಕಾರಿ ಸಂಘದ ಸಂಸ್ಥಾಪಕ ಅಧ್ಯಕ್ಷ ಜಿ.ಆರ್.ಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದಾರೆ. ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ಸಭಾ ಕಾರ್ಯಕ್ರಮದ ಮೊದಲು ಅರೆಹೊಳೆ ಪ್ರತಿಷ್ಠಾನ ಮಂಗಳೂರು ಇದರ ನಂದಗೋಕುಲ ಕಲಾವಿದರಿಂದ ಕು.ಶ್ವೇತಾ ಅರೆಹೊಳೆ ನಿರ್ದೇಶನದಲ್ಲಿ ಗಾನ ನೃತ್ಯ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.