ಸಿದ್ಧರಾಮಯ್ಯ, ಡಿ.ಕೆ.ಶಿವಕುಮಾರ್ ಪ್ರಮಾಣ ಸ್ವೀಕಾರ : ಜಯನಗರ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

0

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯರವರು ಹಾಗೂ ಡಿ.ಕೆ.ಶಿವಕುಮಾರ್ ರವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವ ಹಿನ್ನೆಲೆಯಲ್ಲಿ ಜಯನಗರ ಕಾಂಗ್ರೆಸ್ ಕಾರ್ಯಕರ್ತರಿಂದ ಇಂದು ಸಂಭ್ರಮಾಚರಣೆ ನಡೆಯಿತು.

ಸಂಭ್ರಮಾಚರಣೆಯ ಸಮಾರಂಭದ ವೇದಿಕೆಯಲ್ಲಿ ಉಪಸ್ಥಿತರಿದ್ದ ಕಾಂಗ್ರೆಸ್ ಪಕ್ಷದ ಮುಖಂಡ ಎಂ ವೆಂಕಪ್ಪ ಗೌಡ ಈ ಸಂದರ್ಭದಲ್ಲಿ ಮಾತನಾಡಿ ರಾಜ್ಯದ ಜನತೆ ಬದಲಾವಣೆಯನ್ನು ಬಯಸಿ, ಮತ್ತು ಬಿಜೆಪಿಯ ದುರಾಡಳಿತದಿಂದ ಬೇಸತ್ತು ಕಾಂ

ಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಆದ್ದರಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಎಲ್ಲರನ್ನೂ ಸಮಾನವಾಗಿ ಪ್ರೀತಿಸಿ ಸಮಾಜದಲ್ಲಿ ಯಾವುದೇ ಜಾತಿ ಮತ ಭೇದ ಎಂಬ ವ್ಯತ್ಯಾಸಗಳನ್ನು ಬರಿಸದೆ ಕಾಂಗ್ರೆಸ್ ಪಕ್ಷ ನೀಡಿರುವಂತಹ ಘೋಷಣೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಈ ರೀತಿಯಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಿಕೊಂಡು ಕಾಂಗ್ರೆಸ್ ಪಕ್ಷದ ಅಭಿವೃದ್ಧಿಗಾಗಿ ಶ್ರಮಿಸಬೇಕು ಎಂದು ಹೇಳಿದರು.
ವೇದಿಕೆಯಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮ್ಮಟ್ಟೆ, ಮುಖಂಡರುಗಳಾದ ರಾಜು ಪಂಡಿತ್, ಮಹಮ್ಮದ್ ಮುಟ್ಟತ್ತೊಡಿ, ಜಯನಗರ ವಾರ್ಡ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಿತಿನ್ ಕೊಯಿಂಗೋಡಿ, ಕಾರ್ಯದರ್ಶಿ ಸುಂದರ ಕುತ್ಪಾಜೆ ಉಪಸ್ಥಿತರಿದ್ದರು.
ಸಂಭ್ರಮಾಚರಣೆಯಲ್ಲಿ ಕಾಂಗ್ರೆಸ್ ಪಕ್ಷದ ಸ್ಥಳೀಯ ಕಾರ್ಯಕರ್ತರುಗಳಾದ ಬಾಬು ನಾರಾಜೆ, ಬಾಬು ಕುತ್ಪಾಜೆ, ನವಾಜ್ ಪಂಡಿತ್, ಶರೀಫ್ ಜಯನಗರ, ಆಸಿಫ್ ಜಯನಗರ, ಶಫೀಕ್, ಮೊದಲಾದವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪಟಾಕಿ ಸಿಡಿಸಿ ಪರಸ್ಪರ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.