ರಾಷ್ಟ್ರೀಯ ಮಟ್ಟದ ಸಾಂಸ್ಕೃತಿಕ ಮತ್ತು ನಿರ್ವಹಣಾ ಉತ್ಸವದಲ್ಲಿ ಸುಬ್ರಹ್ಮಣ್ಯದ ಕೆ.ಎಸ್.ಎಸ್ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

0

ಆಳ್ವಾಸ್ ವಿದ್ಯಾಸಂಸ್ಥೆ ಮಂಗಳೂರಿನಲ್ಲಿ ರಾಷ್ಟ್ರೀಯ ಮಟ್ಟದ ಸಾಂಸ್ಕೃತಿಕ ಮತ್ತು ನಿರ್ವಹಣಾ ಉತ್ಸವವು ದಿನಾಂಕ ಮೇ 15 ಮತ್ತು 16ರಂದು ನಡೆಯಿತು. ಈ ಉತ್ಸವದಲ್ಲಿ ಸುಬ್ರಹ್ಮಣ್ಯದ ಕೆ.ಎಸ್.ಎಸ್ ಕಾಲೇಜಿನ ವಾಣಿಜ್ಯ ವಿಭಾಗ ಮತ್ತು ಉದ್ಯಾಮಾಡಳಿತ ವಿಭಾಗದ 25 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕರಕುಶಲ ವಸ್ತು ತಯಾರಿಕೆಯ ಸ್ಪರ್ಧೆಯಲ್ಲಿ ದ್ವಿತೀಯ ಪದವಿಯ ವಾಣಿಜ್ಯ ವಿಭಾಗದ ಶರತ್. ಎಂ. ಆರ್.ರವರು ಭಾಗವಹಿಸಿ ಪ್ರಥಮ ಸ್ಥಾನಿಯಾಗಿದ್ದಾರೆ.