ಮದರ್ ತೆರೇಸಾ ಮೆಮೋರಿಯಲ್ ನ್ಯಾಶನಲ್ ಅವಾರ್ಡ್‌ಗೆ ಡಾ| ರಾಜೇಂದ್ರ ಕುಮಾರ್ ಆಯ್ಕೆ

0

ನ್ಯಾಶನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಹಾಗೂ ದಿ. ನ್ಯೂಸ್ ಪೇಪರ್ಸ್ ಅಸೋಸಿಯೇಶನ್ ಆಫ್ ಕರ್ನಾಟಕ ಬೆಂಗಳೂರು ಇದರ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಮದ‌ ತೆರೇಸಾ ಮೆಮೋರಿಯಲ್ ನ್ಯಾಶನಲ್ ಅವಾರ್ಡ್‌’ಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಆಯ್ಕೆಯಾಗಿದ್ದಾರೆ. ಜೂನ್ 6ರಂದು ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಜರುಗುವ ಅಂತ‌ ರಾಷ್ಟ್ರೀಯ ದಾದಿಯರ ದಿನಾಚರಣೆ ಸಮಾರಂಭದಲ್ಲಿ ಡಾ| ರಾಜೇಂದ್ರ ಕುಮಾರ್ ಪ್ರಶಸ್ತಿ ಸ್ವೀಕರಿಸುವರು.
ಡಾ| ಎಂ.ಎನ್. ರಾಜೇಂದ್ರ ಕುಮಾರ್ ಸಹಕಾರ ಕ್ಷೇತ್ರದಲ್ಲಿ ಸುಮಾರು ನಾಲ್ಕು ದಶಕಗಳ ಕಾಲ ನಿರಂತರವಾಗಿ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡು ಸರ್ವಧರ್ಮಿಯರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ. ಅವರು ಸಹಕಾರ ಕ್ಷೇತ್ರ ಮತ್ತು ಸಾಮಾಜಿಕ ಸೇವಾ ವಲಯದಲ್ಲಿ ಗೈದ ಅನುಪಮ ಸಮಾಜ ಸೇವೆಗಾಗಿ, ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮದರ್ ತೆರೇಸಾರ ಸ್ಮರಣಾರ್ಥ ನೀಡುವ ರಾಷ್ಟ್ರೀಯ ಪ್ರಶಸ್ತಿಗೆ ಪಾತ್ರರಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.