“ಮೆಸ್ಕಾಂ ಸಾಧನಾ ಪುರಸ್ಕಾರ” ಕಾರ್ಯಕ್ರಮದಲ್ಲಿ ಸುಳ್ಯ ಶಾಖೆಗೆ ಪ್ರಥಮ ಸ್ಥಾನ

0

ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿ ನಿ. ಅಯೋಜಿಸದ ೨೦೨೨-೨೩ ನೇ ಸಾಲಿನ ಮೆಸ್ಕಾಂ “ಸಾಧನಾ ಪುರಸ್ಕಾರ” ಕಾರ್ಯಕ್ರಮದಡಿಯಲ್ಲಿ ಮಂಗಳೂರು ವೃತ್ತ ವ್ಯಾಪ್ತಿಯಲ್ಲಿ ಅತ್ಯುತ್ತಮ ನಿರ್ವಹಣೆ ತೋರಿದ ಸುಳ್ಯ ಶಾಖೆಗೆ ಪ್ರಥಮ ಸ್ಥಾನ ಲಭಿಸಿದೆ.

ಪ್ರಶಸ್ತಿಯನ್ನು ಸುಳ್ಯ ಶಾಖೆಯ ಸಹಾಯಕ ಇಂಜಿನಿಯರ್ ಸುಪ್ರೀತ್‌ರವರು ಪಡೆದುಕೊಂಡರು.

ಹಾಗೂ ಪ್ರಶಸ್ತಿ ಪಡೆಯುವಲ್ಲಿ ಯಶಸ್ವಿಯಾದ ಶಾಖೆಯ ಎಲ್ಲಾ ಸಿಬ್ಬಂದಿ ವರ್ಗದವರ ದಕ್ಷ ಕಾರ್ಯನಿರ್ವಹಣೆಯನ್ನು ಕಂಪನಿಯು ಗುರುತಿಸಿ ಪ್ರಶಂಸಿದೆ.

ಈ ಸಂದರ್ಭದಲ್ಲಿ ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಮಂಜಪ್ಪ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.