ಕನಕಮಜಲು: ಮಕ್ಕಳ ಬೇಸಿಗೆ ಶಿಬಿರ ಸಮಾರೋಪ

0

ರಾಜ್ಯ ಸರಕಾರದ ವತಿಯಿಂದ ಆಯೋಜನೆಗೊಂಡು ಕನಕಮಜಲು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜರುಗುತ್ತಿದ್ದ
ಮಕ್ಕಳ ಬೇಸಿಗೆ ಶಿಬಿರವು ಮೇ.26ರಂದು ಸಮಾರೋಪಗೊಂಡಿತು. ಮೇ.19ರಿಂದ ಪ್ರಾರಂಭಗೊಂಡಿದ್ದ ಮಕ್ಕಳ ಬೇಸಿಗೆ ಶಿಬಿರದಲ್ಲಿ ಕನಕಮಜಲಿನ ಶ್ರೀ ನರಿಯೂರು ರಾಮಣ್ಣ ಗೌಡ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಮಾಣಿಮಜಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸುಮಾರು ಇಪ್ಪತ್ತಕ್ಕೂ ಅಧಿಕ ಮಂದಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಮೇ.26ರಂದು ನಡೆದ ಸಮಾರೋಪ ಸಮಾರಂಭದಲ್ಲಿ ಗ್ರಾ. ಪಂ. ಅಧ್ಯಕ್ಷ ಶ್ರೀಧರ ಕುತ್ಯಾಳ ಅವರು ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ದೇವಕಿ ಕುದ್ಕುಳಿ, ಸದಸ್ಯರುಗಳಾದ ರವಿಚಂದ್ರ ಕಾಪಿಲ,ಇಬ್ರಾಹಿಂ ಕಾಸಿಂ‌ ಕನಕಮಜಲು, ಶ್ರೀಮತಿ ಪ್ರೇಮಲತಾ ಪಂಜಿಗುಂಡಿ, ಶ್ರೀಮತಿ ಸುಮಿತ್ರ ಕುತ್ಯಾಳ, ಶ್ರೀಮತಿ ಶಾರದಾ ಉಗ್ಗಮೂಲೆ, ಗ್ರಾ.ಪಂ. ಕಾರ್ಯದರ್ಶಿ ರಮೇಶ್ , ಗ್ರಾ.ಪಂ. ಸಿಬ್ಬಂದಿಗಳು ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಸಾರ್ವಜನಿಕ ಗ್ರಂಥಾಲಯದ ಮೇಲ್ವಿಚಾರಕಿ ಶ್ರೀಮತಿ ನಮಿತ ಕಾರಿಂಜ ಅವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಶಿಬಿರದಲ್ಲಿ ಭಾಗವಹಿಸಿದ್ದ ಮಕ್ಕಳಿಗೆ ಪ್ರಮಾಣ ಪತ್ರ ಹಾಗೂ ಸಂಪನ್ಮೂಲ ವ್ಯಕ್ತಿಗಳಿಗೆ ಅಭಿನಂದನಾ ಪತ್ರ ವಿತರಿಸಲಾಯಿತು.