ಅಮರಮುಡ್ನೂರು ಸಂಕೇಶ ಬಳಿ ಮರ ಬಿದ್ದು ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಹಾನಿ

0

ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕದ ಸಂಕೇಶ ಎಂಬಲ್ಲಿ ಮೇ.25 ರಂದು ಬೀಸಿದ ಭಾರಿ ಗಾಳಿ ಮಳೆಗೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ಇರುವ ವಿದ್ಯುತ್ ‌ಕಂಬದ ಮೇಲೆ ದೊಡ್ಡ ಗಾತ್ರದ ಮರ ಬಿದ್ದು ಹಾನಿ ಸಂಭವಿಸಿದೆ. ವಿದ್ಯುತ್ ತಂತಿಯ ಮೇಲೆ ಮರ ಬಿದ್ದುದರಿಂದ ವಿದ್ಯುತ್ ಕಂಬ ಮುರಿದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಮೆಸ್ಕಾಂ‌ ಇಲಾಖೆಯ ಸಿಬ್ಬಂದಿಗಳು ಆಗಮಿಸಿ ದುರಸ್ತಿ ಕಾರ್ಯಕ್ಕೆ ಮುಂದಾಗಿರುತ್ತಾರೆ.