ಕೊಡಗಿನಲ್ಲಿ ಮತ್ತೆ ಜಲಪ್ರಳಯ ಭೀತಿ

0

ಸರ್ಕಾರಕ್ಕೆ ವರದಿ ಸಲ್ಲಿಸಿದ ಜಿಲ್ಲಾಡಳಿತ : 765 ಕುಟುಂಬಗಳ ಸ್ಥಳಾಂತರಕ್ಕೆ ಚಿಂತನೆ

ಚೆಂಬು, ಸಂಪಾಜೆ ಗ್ರಾಮದ ಹೆಸರುಗಳು ಮುನ್ನೆಚ್ಚರಿಕಾ ಪಟ್ಟಿಯಲ್ಲಿ ಸೇರ್ಪಡೆ

ಕಳೆದ ಐದು ವರ್ಷಗಳಿಂದ ನಿರಂತರವಾಗಿ ಪ್ರಾಕೃತಿಕ ವಿಕೋಪಕ್ಕೆ ಒಳಗಾಗುತ್ತಿರುವ ಕೊಡಗು ಜಿಲ್ಲೆ ಮತ್ತೆ ಅದೇ ಆತಂಕದ ಪರಿಸ್ಥಿತಿಗೆ ಬಂದಂತೆ ಕಾಣುತ್ತಿದೆ.ಜಿಲ್ಲೆಯಲ್ಲಿ ಈ ಬಾರಿಯೂ ಪ್ರವಾಹ ಮತ್ತು ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ ಎಂದು ಸ್ವತಃ ಕೊಡಗು ಜಿಲ್ಲಾಡಳಿತವೇ ಸರ್ಕಾರಕ್ಕೆ ವರದಿ ಸಲ್ಲಿಸಿದೆ.
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನಲ್ಲಿ 765 ಕುಟುಂಬಗಳ 2681 ಜನರನ್ನು ಸ್ಥಳಾಂತರಿಸಬೇಕಾಗಿದ್ದು ಅದಕ್ಕಾಗಿ 26 ಕಾಳಜಿ ಕೇಂದ್ರಗಳು,ಸೋಮವಾರಪೇಟೆ ತಾಲೂಕಿನಲ್ಲಿ 1143 ಕುಟುಂಬಗಳ 4162 ಜನರನ್ನು ಸ್ಥಳಾಂತರಿಸಬೇಕಾಗಿದ್ದು, 30 ಕಾಳಜಿ ಕೇಂದ್ರಗಳನ್ನು ತೆರೆಯಬೇಕಾಗಬಹುದು. ಜೊತೆಗೆ ವಿರಾಜಪೇಟೆ ತಾಲೂಕಿನಲ್ಲಿ 582 ಕುಟುಂಬಗಳ 2049 ಜನರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಬೇಕಾಗಿದ್ದು 26 ಕಾಳಜಿ ಕೇಂದ್ರಗಳನ್ನು ತೆರೆಯಬೇಕಾಗಬಹುದು ಎಂದು ಜಿಲ್ಲಾಡಳಿತ ಸರ್ಕಾರಕ್ಕೆ ವರದಿ ಸಲ್ಲಿಸಿದೆ.ಇನ್ನು ‌ಮಡಿಕೇರಿ ತಾಲೂಕಿನ ಚೆಂಬು, ಕರಿಕೆ, ಸಂಪಾಜೆ,ಮದೆನಾಡು ಗ್ರಾಮಗಳಲ್ಲೂ ಜಲಪ್ರಳಯದ ಆತಂಕವಿದ್ದು, ಈ ಬಾಗಗಳಲ್ಲೂ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ‌ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here