ಸಂಪಾಜೆ : ಮಕ್ಕಳ ಬೇಸಿಗೆ ಶಿಬಿರ ಸಮಾರೋಪ

0

ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಕಾರ್ಯಕ್ರಮ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ ಹಮೀದ್ ಗೂನಡ್ಕ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ನಡೆಯಿತು.


ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ ಮಕ್ಕಳು ತಮ್ಮ ಅನಿಸಿಕೆಗಳನ್ನು ಮುಕ್ತವಾಗಿ ಹಂಚಿಕೊಂಡರು ಪಂಚಾಯತ್ ಅಭಿವೃದ್ಧಿ ಅದಿಕಾರಿ ಸರಿತಾ ಡಿಸೋಜಾ ಶಿಬಿರದ ಮಾಹಿತಿಯನ್ನು ನೀಡಿದರು ವೇದಿಕೆ ಯಲ್ಲಿ ಉಪಾಧ್ಯಕ್ಷರಾದ ಲಿಸ್ಸಿ ಮೊನಾಲಿಸಾ ಸದಸ್ಯರುಗಳಾದ ಜಗದೀಶ್ ರೈ ವಿಮಲಾ ಪ್ರಸಾದ್, ತರಬೇತುದಾರರಾದ ಓನೆಸಿಮಸ್ ರೆಬೆಲ್ಲೊ,, ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು .

ತರಬೇತಿಯಲ್ಲಿ ಭಾಗವಹಿಸಿದ ಎಲ್ಲಾ ಶಿಬಿರರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಪ್ರೀತಮ್ ಹಾಗೂ ಹರ್ಷಿತ್ ಕಾರ್ಯಕ್ರಮ ನಿರೂಪಿಸಿದರು.

ಸಂಪಾಜೆ ಕಲ್ಲುಗುಂಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸೋಮಶೇಖರ್ ಕೊಇಂಗಾಜೆ. ಎಲ್ಲರಿಗೂ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಿದರು.