ಪಂಜ :ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ- ಸಮಾರೋಪ

0

ಪಂಜ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ-2023 ರ ಸಮಾರೋಪ ಸಮಾರಂಭವು ಮೇ.27 ರಂದು ಪಂಜ ಗ್ರಾ.ಪಂ. ನ ಸಭಾಂಗಣದಲ್ಲಿ ಜರಗಿತು.


ಕಾರ್ಯಕ್ರಮವನ್ನು ಹಿರಿಯ ವೈದ್ಯ ಡಾ. ರಾಮಯ್ಯ ಭಟ್ ಉದ್ಘಾಟಿಸಿದರು.ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ ಇವರು ಸಭಾದ್ಯಕ್ಷತೆ ವಹಿಸಿದ್ದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ನೇತ್ರಾವತಿ ಕಲ್ಲಾಜೆ,
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಕೆ.ಆರ್ , ಸಂಪನ್ಮೂಲ ವ್ಯಕ್ತಿಗಳಾದ ಸುಬ್ರಹ್ಮಣ್ಯ ಏನೆಕಲ್ಲು
ಶಶಿಪ್ರಸಾದ್ ಕಾಟೂರ್
ಗ್ರಾಮ ಪಂಚಾಯತ್ ಸದಸ್ಯರಾದ ನಾರಾಯಣ ಕೃಷ್ಣನಗರ, ಜಗದೀಶ್ ಪುರಿಯ, ಲಿಖೀತ್ ಪಲ್ಲೋಡಿ, ಲಕ್ಷ್ಮಣ ಗೌಡ ಬೊಳ್ಳಾಜೆ, ಶ್ರೀಮತಿ ವೀಣಾ ಪಂಜ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಶಿಬಿರಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಕಾರ್ಯಕ್ರಮದಲ್ಲಿ ಗ್ರಂಥಪಾಲಕಿ ಶ್ರೀಮತಿ ಚಿತ್ರಕಲಾ ನಿರೂಪಿಸಿದರು.
ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಸಹಕರಿಸಿದರು.


ಈ ಸಂದರ್ಭದಲ್ಲಿ
ಒಂದು ವಾರದ ಶಿಬಿರದಲ್ಲಿ ಭಾಗವಹಿಸಿದ ಎಲ್ಲಾ ಪುಟಾಣಿಗಳಿಗೂ ಗ್ರಾ.ಪಂ. ಹಾಗೂ ಗ್ರಂಥಾಲಯದ ವತಿಯಿಂದ ಪ್ರಮಾಣಪತ್ರವನ್ನು ವಿತರಿಸಲಾಯಿತು.