ಕುಡೆಕಲ್ಲು ಮಹಮ್ಮಾಯಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ – ಹಸಿರುವಾಣಿ ಸಮರ್ಪಣೆ

0

ಆಲೆಟ್ಟಿ ಗ್ರಾಮದ ಕುಡೆಕಲ್ಲು ಶ್ರೀ ಮಹಮ್ಮಾಯಿ ದೇವಿ ಹಾಗೂ ಪರಿವಾರ ದೈವಗಳ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಮೇ.28 ಮತ್ತು 29 ರಂದು ನಡೆಯಲಿದ್ದು ಮೇ.28 ರಂದು ಪೂರ್ವಾಹ್ನ ಹಸಿರುವಾಣಿ ಮೆರವಣಿಗೆಯು ಸಾಗಿ ಬಂದು ಉಗ್ರಾಣ ತುಂಬುವ ಕಾರ್ಯಕ್ರಮ ನಡೆಯಿತು.


ಈ ಸಂದರ್ಭದಲ್ಲಿ ಅಜ್ಝಾವರ ಮಹಮ್ಮಾಯಿ ದೇವಸ್ಥಾನದಿಂದ ವಾಹನ ಜಾಥಾದೊಂದಿಗೆ ಹಸಿರುವಾಣಿ ಸಮರ್ಪಣೆ ಮಾಡಲಾಯಿತು.


ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರು ಹಾಗೂ ಆಡಳಿತ ಸಮಿತಿ ಆಡಳಿತ ಮೊಕ್ತೇಸರ ಹಾಗೂ ಎಲ್ಲಾ ಸದಸ್ಯರು, ಸ್ಥಳೀಯ ಭಕ್ತಾದಿಗಳು ಭಾಗವಹಿಸಿದರು.