ಕೆ.ವಿ.ಜಿ ಅಮರ ಜ್ಯೋತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಡಾ ರೇಣುಕಾ ಪ್ರಸಾದ್ ಕೆ.ವಿ ಅವರಿಂದ ಸನ್ಮಾನ ಮತ್ತು ಪ್ರೋತ್ಸಾಹ ಧನ

0

೨೦೨೨-೨೩ನೇ ಶೈಕ್ಷಣಿಕ ವ?ದ ದ್ವಿತೀಯ ಪಿ.ಯು.ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಳ್ಯ ತಾಲೂಕಿಗೆ ಪ್ರಥಮ ಸ್ಥಾನ ಪಡೆದ P.ವಿ.ಜಿ ಅಮರ ಜ್ಯೋತಿ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸುಳ್ಯದ ನಾವೂರು ಅಬ್ದುಲ್ ಹಮೀದ್ ಮತ್ತು ಅಹಮದ್ ಬೇಗಂ ದಂಪತಿಗಳ ಪುತ್ರಿ ಆಯಿಶತ್ ಶಿಫಾನ್ ರನ್ನು ಕೆ.ವಿ.ಜಿ ಚಾರಿಟೇಬಲ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಆದ ಡಾ ರೇಣುಕಾ ಪ್ರಸಾದ್ ಕೆ ವಿ ಅವರು ಅಕಾಡೆಮಿಯ ಆಡಳಿತ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ರೂ.೨೫,೦೦೦ ಪ್ರೋತ್ಸಾಹ ಧನ ನೀಡಿ ಗೌರವಿಸಿದರು. ವಾಣಿಜ್ಯ ವಿಭಾಗದಲ್ಲಿ ೫೯೦ ಅಂಕದೊಂದಿಗೆ ತಾಲೂಕಿಗೆ ಪ್ರಥಮ ಸ್ಥಾನಿಯಾಗಿ ಅಪ್ರತಿಮ ಸಾಧನೆ ಮಾಡಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ ಇವರನ್ನು ಪ್ರೋತ್ಸಾಹಿಸಿ ಅವರ ಮುಂದಿನ ಭವಿ?ಕ್ಕೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಅಮರ ಜ್ಯೋತಿ ಪದವಿಪೂರ್ವ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಊರುಬೈಲು, ಕಾಲೇಜಿನ ಪ್ರಾಂಶುಪಾಲೆ ಯಶೋಧ ರಾಮಚಂದ್ರ, ಉಪಪ್ರಾಂಶುಪಾಲರಾದ ದೀಪಕ್ ವೈ ಆರ್, ಅಕಾಡೆಮಿ ಕಛೇರಿಯ ಆಡಳಿತಾಧಿಕಾರಿ ಪ್ರಸನ್ನ ಕಲ್ಲಾಜೆ ಮತ್ತು ಅಮರ ಜ್ಯೋತಿ ಪದವಿಪೂರ್ವ ಕಾಲೇಜಿನ ಬೋಧಕ ಸಿಬ್ಬಂದಿಗಳು ಉಪಸ್ಥಿತರಿದ್ದರು.