ಪೆರುವಾಜೆ ಡಾ.ಶಿವರಾಮ ಕಾರಂತ ಸರಕಾರಿ ಕಾಲೇಜಿನಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ಕಾಮರ್ಸ್ ಫೆಸ್ಟ್ ಎಕ್ಸಲೆನ್ಸಿಯಾ

0

ವಿದ್ಯಾರ್ಥಿಗಳ ತಾರ್ಕಿಕ ಚಿಂತನೆ ಹಾಗೂ ಸೃಜನಶೀಲ ಕೌಶಲ್ಯತೆ ವೃದ್ಧಿಗೆ ಸಹಕಾರಿ: ಭಾಗೀರಥಿ ಮುರುಳ್ಯ

ಪೆರುವಾಜೆ ಡಾ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾಣೀಜ್ಯ ವಿಭಾಗ ಮತ್ತು ಕಾಮರ್ಸ್‌ ಅಸೋಸಿಯೇಷನ್ ವತಿಯಿಂದ ರಾಜ್ಯ ಮಟ್ಟದ ಅಂತರ್ ಕಾಲೇಜು ಕಾಮರ್ಸ್ ಫೆಸ್ಟ್ ಎಕ್ಸಲೆನ್ಸಿಯಾ’ ಕಾರ್ಯಕ್ರಮವು ಮೇ.29 ರಂದು ಕಾಲೇಜಿನ ರಂಗ ಮಂದಿರದಲ್ಲಿ ನಡೆಯಿತು.

ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ವಾಣಿಜ್ಯ ಅಧ್ಯಯನ ಕೇಂದ್ರ ಹಾಗೂ ವಾಣಿಜ್ಯ ಸಂಘದ ವತಿಯಿಂದ ವಾಣಿಜ್ಯ ವಿಭಾಗದ ವಿಷಯಗಳಿಗೆ ಸಂಬಂಧಪಟ್ಟು ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ, ಕೊಡಗು ಸೇರಿ ರಾಜ್ಯದ ವಿವಿಧ ಕಡೆಗಳಿಂದ ಹದಿನೆಂಟು ಸರಕಾರಿ ಕಾಲೇಜುಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದರು.

ಕಾರ್ಯಕ್ರಮವನ್ನು ಶಾಸಕಿ ಕು. ಭಾಗೀರಥಿ ಮುರುಳ್ಯ ಅವರು ಉದ್ಘಾಟಿಸಿ ಮಾತನಾಡಿ ಕಾಲೇಜು ವಿದ್ಯಾರ್ಥಿಗಳಿಗೆ ತಮ್ಮಲ್ಲಿರುವ ತಾರ್ಕಿಕ ಚಿಂತನೆ, ಸೃಜನಶೀಲ ಕೌಶಲ್ಯತೆ ಹೆಚ್ಚಿಸಿಕೊಳ್ಳಲು ಈ ರೀತಿಯ ಕಾರ್ಯಕ್ರಮಗಳು ಸಹಕಾರಿಯಾಗಲಿದೆ ಎಂದು ಹೇಳಿದರು.
ಸರಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಪ್ರಶಂಸನೀಯ ಸಂಗತಿಯಾಗಿದ್ದು, ಬಹಳ ಹಿಂದಿನಿಂದಲೂ ಅತ್ಯುತ್ತಮ ಶೈಕ್ಷಣಿಕ ವ್ಯವಸ್ಥೆಯನ್ನು ಹೊಂದಿರುವ ಪೆರುವಾಜೆಯ ಡಾ.ಶಿವರಾಮ ಕಾಲೇಜು ಇತರೆ ಯಾವುದೇ ಖಾಸಗಿ ಕಾಲೇಜಿಗೂ ಕಡಿಮೆ ಇಲ್ಲದಂತೆ ಕಾರ್ಯಾಚರಿಸುತ್ತಿದೆ. ವಿದ್ಯಾರ್ಥಿಗಳು ಈ ವ್ಯವಸ್ಥೆಯನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಶಿಕ್ಷಣವನ್ನು ಪಡೆದು ಉತ್ತಮ ವೃತ್ತಿಯನ್ನು ಪಡೆಯಲು ಈ ರೀತಿಯ ಕಾರ್ಯಕ್ರಮಗಳು ಸಹಕಾರಿಯಾಗಲಿದೆ ಎಂದು ಶುಭಹಾರೈಸಿದರು.

ಕಾಲೇಜಿನ ಪ್ರಾಂಶುಪಾಲರಾದ ದಾಮೋದರ ಕಣಜಾಲು ಅಧ್ಯಕ್ಷತೆ ವಹಿಸಿದ್ದರು.ಪೆರುವಾಜೆ ಗ್ರಾ.ಪಂ. ಸದಸ್ಯ ಪದ್ಮನಾಭ ಶೆಟ್ಟಿ ಪೆರುವಾಜೆ, ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಣ್ಣಾಜಿ ಗೌಡ, ಕಾಲೇಜಿನ ಐ.ಕ್ಯು.ಎ.ಸಿ. ಸಂಚಾಲಕಿ ಜ್ಯೋತಿ ಎಸ್, ಸಾಂಸ್ಕೃತಿಕ ಸಮಿತಿ ಸಂಚಾಲಕ ಯತೀಶ್ ಕುಮಾರ್ ಎಂ, ವಿದ್ಯಾರ್ಥಿ ಕ್ಷೇಮಾಧಿಕಾರಿ ಕಾಂತರಾಜು ಸಿ, ವಾಣೀಜ್ಯ ಸ್ನಾತಕೋತ್ತರ ವಿಭಾಗದ ಸಂಚಾಲಕಿ ಪ್ರತಿಮಾ ಶೆಟ್ಟಿ, ಕಾಮರ್ಸ್‌ ಫೆಸ್ಟ್ ಸಂಚಾಲಕರಾದ ಶ್ರವಣ್ ಕುಮಾರ್, ಅರ್ಷಿಯಾ, ಕಾಮರ್ಸ್‌ ಅಸೋಸಿಯೇಷನ್‌ ಅಧ್ಯಕ್ಷ ಲತೀನ್‌ ಡಿ, ಕಾರ್ಯದರ್ಶಿ ಶ್ರೇಯಾ ಉಪಸ್ಥಿತರಿದ್ದರು. ಚೈತ್ರ ಸ್ವಾಗತಿಸಿ, ಹರ್ಷಿತಾ ವಂದಿಸಿದರು. ಹರ್ಷಿಯಾ ನಿರೂಪಿಸಿದರು.
ಸುಳ್ಯ ವಿಧಾನಸಭಾ ಕ್ಷೇತ್ರದ ನೂತನ ಶಾಸಕಿಯಾಗಿ ಆಯ್ಕೆಯಾದ ಕು. ಭಾಗೀರಥಿ ಮುರುಳ್ಯ ಅವರನ್ನು ಈ ಸಂದರ್ಭದಲ್ಲಿ ಕಾಲೇಜಿನ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ರಾಜ್ಯಮಟ್ಟದ ಅಂತರ್ ಕಾಲೇಜು ಕಾಮರ್ಸ್ ಫೆಸ್ಟ್ ಎಕ್ಸಲೆನ್ಸಿಯಾ ಸ್ಪರ್ಧೆಯಲ್ಲಿ ಒಟ್ಟು 18 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಂದ ತಂಡಗಳು ಭಾಗವಹಿಸಿದ್ದು, ಮಂಗಳೂರಿನ ಡಾ. ದಯಾನಂದ ಪೈ – ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ಎಕ್ಸಲೆನ್ಸಿಯಾ 2023ರ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು.
ಪುತ್ತೂರಿನ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜು ರನ್ನರಫ್ ಪ್ರಶಸ್ತಿಯನ್ನು ಪಡೆದುಕೊಂಡಿತು.

ಸಮಾರೋಪ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ದಾಮೋದರ ಕಣಜಾಲು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿಡ್ಪಳಿ ಗ್ರಾ.ಪಂ. ಸದಸ್ಯ ನವೀನ್ ರೈ ಚೇಲ್ಯಡ್ಕ, ಕೋಶಾಧಿಕಾರಿ ನಿತೀಶ್ ಕುಮಾರ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.