ಜೂ.1: ಆಲೆಟ್ಟಿ ಸರಕಾರಿ ಶಾಲೆಯಲ್ಲಿ ಎಲ್.ಕೆ.ಜಿ., ಯು.ಕೆ.ಜಿ ತರಗತಿ ಉದ್ಘಾಟನೆ

0

ಆಲೆಟ್ಟಿ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿಎಲ್.ಕೆ.ಜಿ, ಯು.ಕೆ.ಜಿ ತರಗತಿಯಉದ್ಘಾಟನಾ ಸಮಾರಂಭವು ಜೂ.1 ರಂದು ನಡೆಯಲಿರುವುದು.
ಎಲ್.ಕೆ.ಜಿ,ಯು.ಕೆ.ಜಿ ನಿರ್ವಹಣಾ ಸಮಿತಿ ಅಧ್ಯಕ್ಷ ಚಂದ್ರಕಾಂತ ನಾರ್ಕೋಡು ಅಧ್ಯಕ್ಷತೆ ವಹಿಸಲಿರುವರು.


ಆಲೆಟ್ಟಿ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಕುಡೆಕಲ್ಲು ತರಗತಿಯನ್ನು ಉದ್ಘಾಟಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ, ವಿಶ್ರಾಂತ ಪ್ರಾಂಶುಪಾಲ ಕೆ.ಆರ್. ಗಂಗಾಧರ ಉಪಸ್ಥಿತರಿರುವರು.